ADVERTISEMENT

ಬಿಎಚ್‌ಇಎಲ್‌ ಲಾಭ ಏರಿಕೆ

ಪಿಟಿಐ
Published 28 ಅಕ್ಟೋಬರ್ 2024, 12:59 IST
Last Updated 28 ಅಕ್ಟೋಬರ್ 2024, 12:59 IST
ಬಿಎಚ್‌ಇಎಲ್‌
ಬಿಎಚ್‌ಇಎಲ್‌   

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತ್‌ ಹೆವಿ ಎಲೆಕ್ಟ್ರಿಕಲ್ಸ್‌ ಲಿಮಿಟೆಡ್‌ (ಬಿಎಚ್‌ಇಎಲ್‌) 2024–25ರ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹106 ಕೋಟಿ ನಿವ್ವಳ ಲಾಭ ಗಳಿಸಿದೆ.

2023–24ರ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹63 ಕೋಟಿ ನಷ್ಟ ದಾಖಲಿಸಿತ್ತು. ವರಮಾನ ಹೆಚ್ಚಳದಿಂದ ಲಾಭದ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಕಂಪನಿಯು ಷೇರುಪೇಟೆಗೆ ಸೋಮವಾರ ತಿಳಿಸಿದೆ.

ಒಟ್ಟು ವರಮಾನವು ₹6,695 ಕೋಟಿ ಇದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ₹5,305 ಕೋಟಿ ವರಮಾನ ಗಳಿಸಿತ್ತು ಎಂದು ಕಂಪನಿ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.