ವಾಷಿಂಗ್ಟನ್: ಅಮೆರಿಕದ ವಿಮಾನ ತಯಾರಿಕಾ ಕಂಪನಿ ಬೋಯಿಂಗ್ 17 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ನಿರ್ಧರಿಸಿದೆ.
ಜಾಗತಿಕಮಟ್ಟದಲ್ಲಿ ಇರುವ ಒಟ್ಟು ಉದ್ಯೋಗಿಗಳ ಪೈಕಿ ಶೇ 10ರಷ್ಟು ಕಡಿತಗೊಳಿಸಲಾಗುವುದು. ಈ ವಾರದಿಂದಲೇ ನೋಟಿಸ್ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕಂಪನಿ ತಿಳಿಸಿದೆ.
ಕಂಪನಿಯ ದಕ್ಷತೆ ಹೆಚ್ಚಿಸುವುದು ಹಾಗೂ ವೆಚ್ಚ ಸರಿದೂಗಿರುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದೆ.
ಪ್ರಸಕ್ತ ವರ್ಷದ ಆರಂಭದಿಂದಲೂ ಬೋಯಿಂಗ್ ಕಂಪನಿಯು ಹಲವು ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಮೆರಿಕದಲ್ಲಿ ಕಂಪನಿಯ 33 ಸಾವಿರ ಉದ್ಯೋಗಿಗಳು ಹಲವು ವಾರಗಳವರೆಗೆ ಪ್ರತಿಭಟನೆ ನಡೆಸಿದ್ದರು. ಇದರಿಂದ ಕಂಪನಿಯ ವಾಣಿಜ್ಯ ವಿಮಾನಗಳ ತಯಾರಿಕೆಗೆ ಪೆಟ್ಟು ಬಿದ್ದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.