ADVERTISEMENT

ಬ್ಯಾಡಗಿ ಮೆಣಸಿನಕಾಯಿ: 2.19 ಲಕ್ಷ ಚೀಲ ಆವಕ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 22:02 IST
Last Updated 18 ಮಾರ್ಚ್ 2021, 22:02 IST
ಬ್ಯಾಡಗಿ ಮೆಣಸು
ಬ್ಯಾಡಗಿ ಮೆಣಸು   

ಬ್ಯಾಡಗಿ: ಇಲ್ಲಿಯ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಗುರುವಾರ 2.19 ಲಕ್ಷ ಚೀಲ (54,830 ಕ್ವಿಂಟಲ್‌) ಮೆಣಸಿನಕಾಯಿಯನ್ನು ತರಲಾಗಿದ್ದು, ಆವಕದಲ್ಲಿ ತುಸು ಹೆಚ್ಚಳವಾಗಿದೆ.

ಪ್ರಸಕ್ತ ಹಂಗಾಮಿನಲ್ಲಿ 6ನೇ ಬಾರಿಗೆ ಎರಡು ಲಕ್ಷಕ್ಕಿಂತ ಹೆಚ್ಚು ಚೀಲ ಮೆಣಸಿನಕಾಯಿ ಒಂದೇ ದಿನ ಆವಕವಾದಂತಾಗಿದೆ.

18 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹ 32,119ರಂತೆ ಮಾರಾಟವಾಗಿದೆ. ಕಳೆದ ಸೋಮವಾರ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹ 33,909ರಂತೆ ಮಾರಾಟವಾಗಿತ್ತು. ಬ್ಯಾಡಗಿ ಕಡ್ಡಿ ಮತ್ತು ಗುಂಟೂರು ತಳಿ ಮೆಣಸಿನಕಾಯಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.