ನವದೆಹಲಿ: ಕಾರ್ಪೊರೇಟ್ ದಿವಾಳಿ ಪ್ರಕ್ರಿಯೆ ಆರಂಭಿಸುವ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ತ್ವರಿತವಾಗಿ ಆರಂಭಿಸುವಂತೆ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ (ಎನ್‌ಸಿಎಲ್‌ಟಿ) ಬೆಂಗಳೂರು ಶಾಖೆಗೆ, ಗುರುವಾರ ಬೈಜುಸ್ ಕಂಪನಿ ಅರ್ಜಿ ಸಲ್ಲಿಸಿದೆ.
ಭಾರತ ಕ್ರಿಕೆಟ್ ತಂಡದ ಪ್ರಾಯೋಜಕತ್ವಕ್ಕೆ ಸಂಬಂಧಿಸಿದಂತೆ ಬೈಜುಸ್ ₹158 ಕೋಟಿಯನ್ನು ಬಾಕಿ ಉಳಿಸಿಕೊಂಡಿದೆ. ಹಾಗಾಗಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ದಿವಾಳಿ ಪ್ರಕ್ರಿಯೆ ಆರಂಭಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮಂಡಳಿಯು ಅಂಗೀಕರಿಸಿದೆ.
ನ್ಯಾಯಮಂಡಳಿಯು, ಆಡಳಿತ ಮಂಡಳಿಯ ನಿರ್ದೇಶಕರನ್ನು ಅಮಾನತುಗೊಳಿಸಿದೆ. ಹಾಗಾಗಿ, ಈ ಅರ್ಜಿಯ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಕೋರಿದೆ ಎಂದು ಮೂಲಗಳು ತಿಳಿಸಿವೆ.
ಆದರೆ, ಈ ಬಗ್ಗೆ ಬೈಜುಸ್ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.