ಮುಂಬೈ: ದೇಶದ ಚಾಲ್ತಿ ಖಾತೆ ಕೊರತೆಯು (ಸಿಎಡಿ) ಜೂನ್ ತ್ರೈಮಾಸಿಕದ ಅಂತ್ಯದಲ್ಲಿ ಜಿಡಿಪಿಯ ಶೇಕಡ 2.2ರಷ್ಟು ಇದ್ದಿದ್ದು ಸೆಪ್ಟೆಂಬರ್ ತ್ರೈಮಾಸಿಕದ ಅಂತ್ಯದ ವೇಳೆಗೆ ಶೇ 4.4ಕ್ಕೆ ಏರಿಕೆ ಆಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗುರುವಾರ ತಿಳಿಸಿದೆ.
ವ್ಯಾಪಾರ ಕೊರತೆ ಹೆಚ್ಚಾಗುತ್ತಿರುವುದರಿಂದ ಚಾಲ್ತಿ ಖಾತೆ ಕೊರತೆ ಏರಿಕೆ ಆಗುತ್ತಿದೆ. ವ್ಯಾಪಾರ ಕೊರತೆ ಅಂತರವು ಹಣಕಾಸು ವರ್ಷದ ಮೊದಲಾರ್ಧದಲ್ಲಿ ₹ 5.22 ಲಕ್ಷ ಕೋಟಿಯಿಂದ ₹ 6.91 ಲಕ್ಷ ಕೋಟಿಗೆ ಏರಿಕೆ ಆಗಿದೆ.
ಮೌಲ್ಯದ ಲೆಕ್ಕದಲ್ಲಿ, ಭಾರತದ ಚಾಲ್ತಿ ಖಾತೆ ಕೊರತೆಯು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹ 3.01 ಲಕ್ಷ ಕೋಟಿಗೆ (ಶೇ 4.4) ತಲುಪಿದೆ. ಜೂನ್ ತ್ರೈಮಾಸಿಕದಲ್ಲಿ ₹ 1.50 ಲಕ್ಷ ಕೋಟಿಯಷ್ಟು (ಶೇ 2.2) ಇತ್ತು. 2021–22ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ₹ 80,374 ಕೋಟಿ ಇತ್ತು ಎಂದು ಆರ್‌ಬಿಐ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.