ನವದೆಹಲಿ: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ 2024–25ನೇ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹4,015 ಕೋಟಿ ನಿವ್ವಳ ಲಾಭ ಗಳಿಸಿದೆ.
2023–24ನೇ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ ₹3,606 ಕೋಟಿ ಲಾಭ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 11ರಷ್ಟು ಏರಿಕೆಯಾಗಿದೆ ಎಂದು ಬ್ಯಾಂಕ್ ಮಂಗಳವಾರ ಷೇರುಪೇಟೆಗೆ ತಿಳಿಸಿದೆ.
ಕಳೆದ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಒಟ್ಟು ₹31,472 ಕೋಟಿ ವರಮಾನ ಗಳಿಸಿತ್ತು. ಈ ಬಾರಿ ₹34,721 ಕೋಟಿ ಗಳಿಸಿದೆ. ಬಡ್ಡಿ ವರಮಾನವು ₹29,740 ಕೋಟಿ ಆಗಿದೆ.
ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 4.76ರಿಂದ ಶೇ 3.73ಕ್ಕೆ ಇಳಿದಿದೆ. ನಿವ್ವಳ ಎನ್‌ಪಿಎ ಶೇ 1.41ರಿಂದ ಶೇ 0.99ಕ್ಕೆ ಕುಸಿದಿದೆ. ಸಮರ್ಪಕ ಬಂಡವಾಳ ಅನುಪಾತ (ಸಿಎಆರ್) ಶೇ 16.57ರಷ್ಟಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.