ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಲ್ಲಿ ಹೆಚ್ಚುವರಿಯಾಗಿ 16,105 ಟನ್ ಹೆಸರುಕಾಳು ಖರೀದಿಗೆ ಕೇಂದ್ರ ಕೃಷಿ ಸಚಿವಾಲಯ ಒಪ್ಪಿಗೆ ನೀಡಿದೆ.
‘ರಾಜ್ಯದಲ್ಲಿ ಹೆಸರು ಬೆಳೆಗಾರರು ಸಂಕಷ್ಟದಲ್ಲಿದ್ದು, ಬೆಂಬಲ ಬೆಲೆಯಲ್ಲಿ ಖರೀದಿ ಹೆಚ್ಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದೆ. ಸಚಿವರು ಇದಕ್ಕೆ ಸ್ಪಂದಿಸಿದ್ದಾರೆ’ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಮೊದಲು 22,215 ಟನ್ ಹೆಸರುಕಾಳು ಖರೀದಿಗೆ ಕೇಂದ್ರ ಅನುಮತಿ ನೀಡಿತ್ತು. ಇದನ್ನು 38,320 ಟನ್‌ಗೆ ಹೆಚ್ಚಳ ಮಾಡಲಾಗಿದೆ.
ತ್ವರಿತ ಖರೀದಿಗೆ ಸೂಚನೆ: ರಾಜ್ಯ ಸರ್ಕಾರ ಮತ್ತು ಕೇಂದ್ರದ ನೋಡಲ್ ಏಜೆನ್ಸಿಗಳು ಕೂಡಲೇ ರಾಜ್ಯದಾದ್ಯಂತ ಹೆಸರು ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು. ತ್ವರಿತವಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಸಚಿವ ಜೋಶಿ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.