ADVERTISEMENT

‘ಆರ್ಥಿಕತೆ ಗಾತ್ರ ಹೆಚ್ಚಿಸಲು ಸಲಹೆ ಸಂಗ್ರಹ’

ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಕಾರ್ಯಕಾರಿ ನಿರ್ದೇಶಕ ಪಿ. ರಮಣಮೂರ್ತಿ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2019, 20:00 IST
Last Updated 17 ಆಗಸ್ಟ್ 2019, 20:00 IST
   

ಬೆಂಗಳೂರು: ‘ಕೇಂದ್ರ ಹಣಕಾಸು ಸಚಿವಾಲಯದ ನಿರ್ದೇಶನದಂತೆ,ಬ್ಯಾಂಕಿಂಗ್‌ ಕ್ಷೇತ್ರವನ್ನು ಗ್ರಾಹಕರಿಗೆ ಇನ್ನಷ್ಟು ಹತ್ತಿರವಾಗಿಸುವ ಮತ್ತು ದೇಶದ ಆರ್ಥಿಕತೆಯ ಗಾತ್ರ ಹೆಚ್ಚಿಸುವುದಕ್ಕಾಗಿಹೊಸ ಆಲೋಚನಾ ಕ್ರಮಗಳ ಸಂವಹನ ಪ್ರಕ್ರಿಯೆ ಆರಂಭಿಸಲಾಗಿದೆ’ ಎಂದು ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಕಾರ್ಯಕಾರಿ ನಿರ್ದೇಶಕ ಪಿ. ರಮಣಮೂರ್ತಿ ಹೇಳಿದರು.

ನಗರದ ಕೆ.ಜಿ.ರಸ್ತೆಯಲ್ಲಿರುವ ಪ್ರಾದೇಶಿಕ ಕಚೇರಿಯಲ್ಲಿಶನಿವಾರ ಆಯೋಜಿಸಲಾಗಿದ್ದ ರಾಜ್ಯದ ವಿವಿಧ ಶಾಖೆಗಳ ವ್ಯವಸ್ಥಾಪಕರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಪ್ರಾದೇಶಿಕ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಲಹೆಗಳನ್ನು ಸಂಗ್ರಹಿಸಲಾಗುತ್ತಿದ್ದು, ಇದರ ಮೊದಲ ಭಾಗವಾಗಿ ಬ್ಯಾಂಕ್‌ನ 90 ಪ್ರಾದೇಶಿಕ ಕಚೇರಿಗಳಲ್ಲಿ ಸಭೆಗಳನ್ನು ಆಯೋಜಿಸಲಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಗ್ರಾಹಕರಿಗೆ ತಲುಪಿಸುವ, ಆರ್ಥಿಕ ಚೇತರಿಕೆಗೆ ಒತ್ತು ನೀಡುವ ದೆಸೆಯಲ್ಲಿ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಚರ್ಚೆ ನಡೆದಿದೆ’ ಎಂದು ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.