ADVERTISEMENT

ಕೋವಿಡ್ ಲಸಿಕೆ ಪಡೆದವರಿಗೆ ಸೆಂಟ್ರಲ್ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಹೆಚ್ಚು ಬಡ್ಡಿ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 14:33 IST
Last Updated 14 ಏಪ್ರಿಲ್ 2021, 14:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೋವಿಡ್–19 ಲಸಿಕೆ ಹಾಕಿಸಿಕೊಳ್ಳುವುದನ್ನು ಉತ್ತೇಜಿಸುವ ಗುರಿಯೊಂದಿಗೆ ಸೆಂಟ್ರಲ್ ಬ್ಯಾಂಕ್‌ ಆಫ್‌ ಇಂಡಿಯಾ ವಿಶೇಷ ನಿಶ್ಚಿತ ಠೇವಣಿ ಯೋಜನೆಯೊಂದನ್ನು ಘೋಷಿಸಿದೆ.

ಲಸಿಕೆ ಹಾಕಿಸಿಕೊಂಡವರಿಗೆ ಈ ಯೋಜನೆಯ ಅಡಿಯಲ್ಲಿ ಮಮೂಲಿ ಬಡ್ಡಿ ದರಕ್ಕಿಂತ ಹೆಚ್ಚುವರಿಯಾಗಿ ಶೇಕಡ 0.25ರಷ್ಟು ಬಡ್ಡಿ ಸಿಗಲಿದೆ. ‘ಇಮ್ಯೂನ್‌ ಇಂಡಿಯಾ ಡೆಪಾಸಿಟ್ ಸ್ಕೀಂ’ ಹೆಸರಿನ ಈ ಯೋಜನೆಯ ಅವಧಿಯು 1,111 ದಿನಗಳು. ಇದು ಸೀಮಿತ ಅವಧಿಯ ಯೋಜನೆ ಎಂದು ಬ್ಯಾಂಕ್‌ ಹೇಳಿದೆ.

ಯೋಜನೆಯ ಅಡಿಯಲ್ಲಿ ಹಿರಿಯ ನಾಗರಿಕರಿಗೆ ಮಾಮೂಲಿ ಬಡ್ಡಿ ದರಕ್ಕಿಂತ ಹೆಚ್ಚುವರಿಯಾಗಿ ಶೇ 0.50ರಷ್ಟು ಬಡ್ಡಿ ಸಿಗಲಿದೆ ಎಂದು ಬ್ಯಾಂಕ್‌ ಟ್ವೀಟ್ ಮಾಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.