ನವದೆಹಲಿ: ರೈತರ ಕಬ್ಬಿನ ಬಾಕಿ ಹಣ ಪಾವತಿಗೆ ಅನುಕೂಲವಾಗುವಂತೆ ದೇಶದ ಸಕ್ಕರೆ ಕಾರ್ಖಾನೆಗಳಿಗೆ ಕಳೆದ ಐದು ವರ್ಷಗಳಲ್ಲಿ ವಿವಿಧ ಯೋಜನೆಯಡಿ ₹15,948 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಅವರು, ರಾಜ್ಯಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.
‘ಸಕಾಲದಲ್ಲಿ ರೈತರಿಗೆ ಬಾಕಿ ಮೊತ್ತ ಪಾವತಿಸಲು ನೆರವಾಗುವಂತೆ ಕಾರ್ಖಾನೆಗಳು ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಈ ನೆರವು ಕಲ್ಪಿಸಲಾಗಿದೆ’ ಎಂದು ಹೇಳಿದ್ದಾರೆ.
ಸಕ್ಕರೆ ದಾಸ್ತಾನು, ಕಾರ್ಖಾನೆಗಳ ಮಾರುಕಟ್ಟೆ ವಿಸ್ತರಣೆ, ಸಂಸ್ಕರಣಾ ಶುಲ್ಕ, ಆಂತರಿಕ ಸಾರಿಗೆ, ಸರಕು ಸಾಗಣೆ ಸೇರಿದಂತೆ ರಫ್ತು ವೆಚ್ಚದ ನಿರ್ವಹಣೆಗಾಗಿ ಈ ನೆರವು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.