ಮುಂಬೈ: ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನೀಡಲಾಗಿದೆ.
ಅಕ್ರಮ ಹಣ ವರ್ಗಾವಣೆ ತಡೆಗೆ ಸಂಬಂಧಿಸಿದ ವಿಶೇಷ ನ್ಯಾಯಾಲಯವು ಚಂದಾ ಅವರನ್ನು ಕೋರ್ಟ್‌ಗೆ ಹಾಜರಾಗುವಂತೆ ಜನವರಿ 30ರಂದು ಸೂಚಿಸಿತ್ತು. ಚಂದಾ ಅವರ ಪತಿ ದೀಪಕ್ ಹಾಗೂ ವಿಡಿಯೊಕಾನ್ ಸಮೂಹದ ಪ್ರವರ್ತಕ ವೇಣುಗೋಪಾಲ್ ಧೂತ್ ಅವರಿಗೂ ಹಾಜರಾಗುವಂತೆ ಸೂಚನೆ ನೀಡಿತ್ತು.
ಚಂದಾ ಅವರು ಜಾರಿ ನಿರ್ದೇಶನಾಲಯದ ತನಿಖೆಗೆ ಸಹಕಾರ ನೀಡುತ್ತಿದ್ದಾರೆ ಎಂದು ಅವರ ವಕೀಲರು ನ್ಯಾಯಾಲಯಕ್ಕೆ ವಿವರಿಸಿದರು. ಅವರನ್ನು ಈ ಪ್ರಕರಣದಲ್ಲಿ ಯಾವ ಸಂದರ್ಭದಲ್ಲೂ ಬಂಧಿಸಲಾಗಿಲ್ಲ ಎಂದು ಕೂಡ ತಿಳಿಸಿದರು.
₹ 5 ಲಕ್ಷದ ಬಾಂಡ್ ಪಡೆದು ನ್ಯಾಯಾಲಯ ಜಾಮೀನು ಮಂಜೂರು ಮಾಡಿತು. ನ್ಯಾಯಾಲಯದ ಅನುಮತಿ ಇಲ್ಲದೆ ದೇಶ ಬಿಟ್ಟು ತೆರಳುವಂತೆ ಇಲ್ಲ ಎಂದು ತಾಕೀತು ಮಾಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.