ಬೀಜಿಂಗ್: ಆ್ಯಪಲ್ ಐಫೋನ್ ಮತ್ತು ಇತರ ಗ್ಯಾಜೆಟ್‌ಗಳನ್ನು ಉತ್ಪಾದಿಸುವ ಚೀನಾದ ಅತಿದೊಡ್ಡ ಫಾಕ್ಸ್‌ಕಾನ್ ಫ್ಯಾಕ್ಟರಿಯಲ್ಲಿ ಕಾರ್ಮಿಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗದ್ದಲ ಉಂಟಾಗಿದೆ.
ಫ್ಯಾಕ್ಟರಿಯಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸುತ್ತಿಲ್ಲ ಎಂದು ಕಾರ್ಮಿಕರು ಗಲಾಟೆ ಮಾಡಿದ್ದಾರೆ.
ಕಾರ್ಮಿಕರ ಗದ್ದಲವನ್ನು ತಣ್ಣಗಾಗಿಸಲು ಭದ್ರತಾ ಸಿಬ್ಬಂದಿ ಅವರ ವಿರುದ್ಧ ಬಲಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜತೆಗೆ, ಉದ್ಯೋಗಿಗಳು ತೊಂದರೆ ಅನುಭವಿಸುತ್ತಿರುವ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡಿವೆ. ಆದರೆ, ನಂತರದಲ್ಲಿ ಆ ಪೋಸ್ಟ್‌ಗಳನ್ನು ತೆಗೆದುಹಾಕಲಾಗಿದೆ ಎಂದು ವರದಿಯಾಗಿದೆ.
ಚೀನಾದಲ್ಲಿ ಕೋವಿಡ್ ಪರಿಣಾಮ ಆ್ಯಪಲ್ ಫ್ಯಾಕ್ಟರಿಗಳನ್ನು ಮುಚ್ಚಲಾಗಿತ್ತು. ಮತ್ತೊಂದೆಡೆ, ಉದ್ಯೋಗಿಗಳಿಗೆ ಕೋವಿಡ್ ಸೋಂಕು ಹರಡದಂತೆ ತಡೆಯಲು, ಅವರನ್ನು ಫ್ಯಾಕ್ಟರಿಯಲ್ಲೇ ಉಳಿಸಲಾಗಿತ್ತು.
ಆ್ಯಪಲ್ ಐಫೋನ್ ಉತ್ಪಾದನೆಯ ಮೇಲೆ ಇದರಿಂದ ಪರಿಣಾಮವಾಗಿದೆ. ಜತೆಗೆ, ಉದ್ಯೋಗಿಗಳೂ ಆರೋಗ್ಯದ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ವರದಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.