ಬೀಜಿಂಗ್: ದೇಶದ ಆರ್ಥಿಕತೆಗೆ ಚೇತರಿಕೆ ನೀಡುವ ನಿಟ್ಟಿನಲ್ಲಿ ಪೀಪಲ್ಸ್ ಬ್ಯಾಂಕ್ ಆಫ್ ಚೀನಾವು, ಮಂಗಳವಾರ ಸಾಲದ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿದೆ.
ಐದು ವರ್ಷಗಳ ಅವಧಿಯ ಸಾಲದ ಬಡ್ಡಿದರವನ್ನು ಶೇ 4.2ರಿಂದ ಶೇ 3.95ಕ್ಕೆ ಇಳಿಸಲಾಗಿದೆ. ಒಂದು ವರ್ಷ ಅವಧಿಯ ಕಾರ್ಪೊರೇಟ್ ಸಾಲದ ಬಡ್ಡಿದರ ಶೇ 3.45ರಷ್ಟಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ ಬ್ಯಾಂಕ್ ತಿಳಿಸಿದೆ.
ದೇಶದ ವಸತಿ ವಲಯದ ಬೆಳವಣಿಗೆಯು ಇಳಿಮುಖವಾಗಿದೆ. ನಿರುದ್ಯೋಗ ಪ್ರಮಾಣವೂ ಹೆಚ್ಚುತ್ತಿದೆ. ಜಾಗತಿಕ ಆರ್ಥಿಕತೆಯ ಮಂದಗತಿ ಬೆಳವಣಿಗೆಯಿಂದಾಗಿ ಚೀನಿ ಉತ್ಪನ್ನಗಳಿಗೆ ಬೇಡಿಕೆ ಕಡಿಮೆಯಾಗುತ್ತಿದೆ. ಹಾಗಾಗಿ, ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾದ ಚೀನಾವು, ಬಡ್ಡಿದರ ಇಳಿಸುವ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.