ನವದೆಹಲಿ: 2024–25ರ ಹಣಕಾಸು ವರ್ಷದ ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ದೇಶದ ಕಲ್ಲಿದ್ದಲು ಉತ್ಪಾದನೆ ಪ್ರಮಾಣ ಶೇ 6ರಷ್ಟು ಏರಿಕೆಯಾಗಿದ್ದು, 38.40 ಕೋಟಿ ಟನ್‌ಗೆ ತಲುಪಿದೆ.
2023–24ರ ಹಣಕಾಸು ವರ್ಷದ ಇದೇ ಅವಧಿಯಲ್ಲಿ 36 ಕೋಟಿ ಟನ್ ಕಲ್ಲಿದ್ದಲು ಉತ್ಪಾದನೆ ಆಗಿತ್ತು ಎಂದು ಕಲ್ಲಿದ್ದಲು ಸಚಿವಾಲಯ ತಿಳಿಸಿದೆ.
ಸಿಐಎಲ್ ಉತ್ಪಾದನೆ ಇಳಿಕೆ:
ಸರ್ಕಾರಿ ಸ್ವಾಮ್ಯದ ಭಾರತೀಯ ಕಲ್ಲಿದ್ದಲು ನಿಗಮ (ಸಿಐಎಲ್) ಆಗಸ್ಟ್ ತಿಂಗಳಲ್ಲಿ 4.61 ಕೋಟಿ ಟನ್ ಕಲ್ಲಿದ್ದಲು ಉತ್ಪಾದನೆ ಮಾಡಿದೆ.
2023ರ ಆಗಸ್ಟ್‌ನಲ್ಲಿ 5.23 ಕೋಟಿ ಟನ್ ಕಲ್ಲಿದ್ದಲು ಉತ್ಪಾದನೆಯಾಗಿತ್ತು. ಈ ಉತ್ಪಾದನೆಗೆ ಹೋಲಿಸಿದರೆ ಶೇ 12ರಷ್ಟು ಇಳಿಕೆಯಾಗಿದೆ ಎಂದು ನಿಗಮವು ಷೇರುಪೇಟೆಗೆ ಸೋಮವಾರ ತಿಳಿಸಿದೆ.
ಏಪ್ರಿಲ್‌ನಿಂದ ಆಗಸ್ಟ್ ಅವಧಿಯಲ್ಲಿ 29 ಕೋಟಿ ಟನ್ ಕಲ್ಲಿದ್ದಲು ಉತ್ಪಾದಿಸಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 28 ಕೋಟಿ ಟನ್ ಉತ್ಪಾದನೆಯಾಗಿದೆ.
ದೇಶೀಯ ಕಲ್ಲಿದ್ದಲು ಉತ್ಪಾದನೆಯಲ್ಲಿ ಸಿಐಎಲ್ ಪಾಲು ಶೇ 80ಕ್ಕೂ ಹೆಚ್ಚಿದೆ. 2023–24ರ ಪೂರ್ಣ ಹಣಕಾಸು ವರ್ಷದಲ್ಲಿ 77.36 ಕೋಟಿ ಟನ್ ಕಲ್ಲಿದ್ದಲು ಉತ್ಪಾದನೆಯಾಗಿತ್ತು. 2022–23ರ ಇದೇ ಅವಧಿಯಲ್ಲಿ 70.32 ಕೋಟಿ ಟನ್‌ನಷ್ಟಾಗಿತ್ತು ಎಂದು ತಿಳಿಸಿದೆ.
Cut-off box - null
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.