ADVERTISEMENT

22ಕ್ಕೆ ಕಾಫಿ ಬೆಳೆಗಾರರ ಸಮಾವೇಶ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2018, 17:06 IST
Last Updated 16 ಅಕ್ಟೋಬರ್ 2018, 17:06 IST
ಕಾಫಿ ಬೀಜ
ಕಾಫಿ ಬೀಜ   

ಬೆಂಗಳೂರು: ಕಾಫಿ ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಇದೇ 22ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿನ ಸಂಪಂಗಿರಾಮನಗರದ ಎಸ್‌ಸಿಎಂ ಹೌಸ್‌ನಲ್ಲಿ ಕಾಫಿ ಬೆಳೆಗಾರರ ಅಖಿಲ ಭಾರತ ಸಮಾವೇಶ ಹಮ್ಮಿಕೊಳ್ಳ
ಲಾಗಿದೆ.

ಅಖಿಲ ಭಾರತ ಕಿಸಾನ್ ಸಭಾ, ಕಾಫಿ ಬೆಳೆಗಾರರ ಒಕ್ಕೂಟದ ಸಹಯೋಗದಲ್ಲಿ ಸಮಾವೇಶ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಪ್ರಾಂತ್ಯ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ರಾಜ್ಯದ ಕಾಫಿ ಬೆಳೆಗಾರರ ಸ್ಥಿತಿ ಗಂಭೀರವಾಗಿದೆ. ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದರಿಂದ ಬೆಳೆಗಾರರು ಶೇ 84 ನಷ್ಟ ಅನುಭವಿಸುವಂತಾಗಿದೆ.

ADVERTISEMENT

‘ಅಗ್ಗದ ದರದ ಆಮದು ದಾಸ್ತಾನಿನ ಮೇಲೆ ಆಮದು ಸುಂಕ ವಿಧಿಸಿ ಬೆಳೆಗಾರರ ರಕ್ಷಿಸಲು ಕ್ರಮಕೈಗೊಳ್ಳಬೇಕು. ಬೆಳೆ ವಿಮೆಯನ್ನು ವೈಜ್ಞಾನಿಕವಾಗಿ ಜಾರಿಗೊಳಿಸಬೇಕು. ಬೆಂಬಲ ಬೆಲೆ ಘೋಷಣೆ ಮತ್ತು ಕಾಫಿ ಬೆಳೆಗಾರರ ಸಾಲ ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.

‘ಅಖಿಲ ಭಾರತ ಕಿಸಾನ್ ಸಭಾದ ಪ್ರಧಾನ ಕಾರ್ಯದರ್ಶಿ ಹನನ್ ಮುಲ್ಲಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.