ADVERTISEMENT

ಸಾಲ ಮರುಪಾವತಿಗೆ ಕಾಫಿ ಡೇ ವಿಫಲ

​ಪ್ರಜಾವಾಣಿ ವಾರ್ತೆ
Published 6 ಜುಲೈ 2023, 23:30 IST
Last Updated 6 ಜುಲೈ 2023, 23:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕಾಫಿ ಡೇ ಎಂಟರ್‌ಪ್ರೈಸಸ್‌ ಲಿಮಿಟೆಡ್ ಕಂಪನಿಯು ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಒಟ್ಟು ₹440 ಕೋಟಿ ಸಾಲ ಮರುಪಾವತಿಸುವಲ್ಲಿ ವಿಫಲವಾಗಿದೆ.

ಕಂಪನಿಯು ಈ ವಿಚಾರವನ್ನು ಷೇರುಪೇಟೆಗೆ ತಿಳಿಸಿದೆ. ನಗದೀಕರಣಕ್ಕೆ ಸಂಬಂಧಿಸಿದ ಬಿಕ್ಕಟ್ಟಿನ ಕಾರಣದಿಂದಾಗಿ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿಲ್ಲ ಎಂಬ ವಿಚಾರವನ್ನೂ ಕಂಪನಿಯು ಷೇರುಪೇಟೆಗೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT