ನವದೆಹಲಿ: ದಾವೋಸ್‌ನಲ್ಲಿ ಇದೇ 20ರಿಂದ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಲಿರುವ ಭಾರತದ ನಿಯೋಗದ ನೇತೃತ್ವವನ್ನು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಅವರು ವಹಿಸಲಿದ್ದಾರೆ.
ಭಾರತೀಯ ರೈಲ್ವೆಯಲ್ಲಿ ಹೂಡಿಕೆ ಹೆಚ್ಚಿಸುವುದು ಹಾಗೂ ಜಾಗತಿಕ ಸಾಂಸ್ಥಿಕ ಹೂಡಿಕೆದಾರರನ್ನು ಭಾರತಕ್ಕೆ ಆಕರ್ಷಿಸುವ ವಿಷಯಗಳ ಕುರಿತ ವಿಚಾರಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ವಾಣಿಜ್ಯ ಸಚಿವಾಲಯದ ಪ್ರಕಟಣೆಯ ತಿಳಿಸಿದೆ.
ಇದೇ ಸಂದರ್ಭದಲ್ಲಿ ನಡೆಯಲಿರುವ ವಿಶ್ವ ವಾಣಿಜ್ಯ ಸಂಘಟನೆಯ ಸಚಿವರ ಅನೌಪಚಾರಿಕ ಸಭೆಯಲ್ಲಿಯೂ ಅವರು ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.