ನವದೆಹಲಿ: ಹೋಟೆಲ್, ರೆಸ್ಟೋರೆಂಟ್ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್‌ಪಿಜಿ ಸಿಲಿಂಡರ್ ದರ ಮಂಗಳವಾರ ₹91.50 ಕಡಿತವಾಗಲಿದೆ ಎಂದು ಮೂಲಗಳ ಮಾಹಿತಿ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ರಾಷ್ಟ್ರೀಯ ತೈಲ ಮಾರಾಟ ಕಂಪನಿಗಳು ಬೆಲೆ ಇಳಿಕೆ ನಿರ್ಧಾರ ಕೈಗೊಂಡಿವೆ ಎನ್ನಲಾಗಿದ್ದು, ಇಂದಿನಿಂದಲೇ ಹೊಸ ದರ (ಫೆಬ್ರುವರಿ 1) ಜಾರಿಗೆ ಬರುವ ಸಾಧ್ಯತೆಗಳಿವೆ.
ಈ ತೀರ್ಮಾನದಿಂದ ದೆಹಲಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಬಳಸುವ 19 ಕೆ.ಜಿ ಎಲ್‌ಪಿಜಿ ಸಿಲಿಂಡರ್ ದರ ₹1907 ಆಗಲಿದೆ.
ಕೇಂದ್ರ ಸರ್ಕಾರ 2022–23ನೇ ಸಾಲಿನ ಬಜೆಟ್ ಅನ್ನು ಇಂದು ಮಂಡಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.