ADVERTISEMENT

‘ಜಿಎಸ್‌ಟಿ ಪರಿಹಾರ ನೀಡಲು ಬದ್ಧ’

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 20:00 IST
Last Updated 12 ಡಿಸೆಂಬರ್ 2019, 20:00 IST
ಪಿಟಿಐ
ಪಿಟಿಐ   

ನವದೆಹಲಿ: ‘ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಜಿಎಸ್‌ಟಿ ಜಾರಿಗೊಳಿಸುವುದರಿಂದ ರಾಜ್ಯಗಳಿಗೆ ಆಗುವ ವರಮಾನ ನಷ್ಟ ತುಂಬಿಕೊಡಲು ಕೇಂದ್ರ ಸರ್ಕಾರವು ಮೊದಲ ಐದು ವರ್ಷಗಳಿಗೆ ಪರಿಹಾರ ನೀಡಲು ನಿರ್ಧರಿಸಿದೆ. ಆದರೆ, ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತು ರಾಜ್ಯಸಭೆಯಲ್ಲಿ ಅವರು ಹೇಳಿಕೆ ನೀಡಿದ್ದಾರೆ. ಪರಿಹಾರ ಮೊತ್ತವು ಯಾವಾಗ ರಾಜ್ಯಗಳ ಕೈಸೇರಲಿದೆ ಎನ್ನುವುದಕ್ಕೆ ಅವರು ಉತ್ತರ ನೀಡಿಲ್ಲ. ಜಿಎಸ್‌ಟಿ ಸೆಸ್‌ನಿಂದ ಸಂಗ್ರಹಿಸಿರುವ ಮೊತ್ತದಲ್ಲಿ ₹ 9,783 ಕೋಟಿ ಬಿಡುಗಡೆ ಮಾಡಲಾಗಿದೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT