ADVERTISEMENT

ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ವಿನಾಯಿತಿ ಮುಂದುವರಿಸಿದ ಕೇಂದ್ರ ಸರ್ಕಾರ

ಪಿಟಿಐ
Published 2 ಅಕ್ಟೋಬರ್ 2022, 12:29 IST
Last Updated 2 ಅಕ್ಟೋಬರ್ 2022, 12:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಕೆಲವು ಅಡುಗೆ ಎಣ್ಣೆಗಳ ಆಮದು ಸುಂಕಕ್ಕೆ ನೀಡಿರುವ ವಿನಾಯಿತಿಯು ಮಾರ್ಚ್‌ 31ರವರೆಗೂ ಮುಂದುವರಿಯಲಿದೆ ಎಂದು ಕೇಂದ್ರ ಆಹಾರ ಸಚಿವಾಲಯ ಭಾನುವಾರ ತಿಳಿಸಿದೆ.

ಚಿಲ್ಲರೆ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವ, ದೇಶಿ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯು ಹೆಚ್ಚು ಲಭ್ಯವಾಗಬೇಕು ಎಂಬ ಉದ್ದೇಶದಿಂದ ಕೇಂದ್ರ ಪರೋಕ್ಷ ತೆರಿಗೆಗಳು ಮತ್ತು ಸುಂಕಗಳ ಮಂಡಳಿಯು ಆಮದು ಸುಂಕಕ್ಕೆ ರಿಯಾಯಿತಿ ನೀಡುವ ತೀರ್ಮಾನವನ್ನು ಆಗಸ್ಟ್‌ 31ರಂದು ಕೈಗೊಂಡಿತ್ತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಗಳ ಬೆಲೆ ಇಳಿಕೆ ಹಾಗೂ ಕಡಿಮೆ ಆಮದು ಸುಂಕದ ಕಾರಣದಿಂದಾಗಿ ದೇಶದ ಚಿಲ್ಲರೆ ಮಾರುಕಟ್ಟೆಯಲ್ಲಿ ಇವುಗಳ ಬೆಲೆಯು ಗಣನೀಯವಾಗಿ ತಗ್ಗಿದೆ ಎಂದು ಸಚಿವಾಲಯ ಹೇಳಿದೆ.

ADVERTISEMENT

ಈಗ ಕಚ್ಚಾ ತಾಳೆ ಎಣ್ಣೆ, ಕಚ್ಚಾ ಸೋಯಾ ಎಣ್ಣೆ, ರಿಫೈನ್ಡ್ ಸೋಯಾ ಎಣ್ಣೆ, ಕಚ್ಚಾ ಸೂರ್ಯಕಾಂತಿ ಎಣ್ಣೆ ಮತ್ತು ರಿಫೈನ್ಡ್ ಸೂರ್ಯಕಾಂತಿ ಎಣ್ಣೆಗೆ ಆಮದು ಸುಂಕ ಇಲ್ಲ. ಆದರೆ ಶೇಕಡ 5ರಷ್ಟು ಕೃಷಿ ಸೆಸ್ ಹಾಗೂ ಶೇ 10ರಷ್ಟು ಸಮಾಜ ಕಲ್ಯಾಣ ಸೆಸ್ ವಿಧಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.