ADVERTISEMENT

ನಿರುದ್ಯೋಗ ದರ ಶೇ 13.4ಕ್ಕೆ ಇಳಿಕೆ: ನಿರ್ಮಲಾ

ಪಿಟಿಐ
Published 10 ಫೆಬ್ರುವರಿ 2024, 13:40 IST
Last Updated 10 ಫೆಬ್ರುವರಿ 2024, 13:40 IST
<div class="paragraphs"><p>ರಾಜ್ಯಸಭೆಯಲ್ಲಿ ಶನಿವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಾತನಾಡಿದರು </p></div>

ರಾಜ್ಯಸಭೆಯಲ್ಲಿ ಶನಿವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಾತನಾಡಿದರು

   

–ಪಿಟಿಐ ಚಿತ್ರ

ನವದೆಹಲಿ: ‘ಕಳೆದ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಸರಿಯಾದ ಹಳಿಗೆ ತರಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ADVERTISEMENT

ರಾಜ್ಯಸಭೆಯಲ್ಲಿ ಶನಿವಾರ ‘ಭಾರತದ ಆರ್ಥಿಕತೆ ಮೇಲಿನ ಶ್ವೇತಪತ್ರ’ ಎಂಬ ವಿಷಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ 2017ರಲ್ಲಿ ಪದವೀಧರರ ನಿರುದ್ಯೋಗ ದರವು ಶೇ 17.3ರಷ್ಟಿತ್ತು. 2023ರಲ್ಲಿ ಇದು ಶೇ 13.4ಕ್ಕೆ ಇಳಿಕೆಯಾಗಿದೆ ಎಂದು ಹೇಳಿದರು.

ಸರ್ಕಾರದ ಸಾಧನೆಗಳನ್ನು ಹಾಳುಗೆಡುವ ಕಲೆಯು ಕಾಂಗ್ರೆಸ್‌ಗೆ ಕರಗತವಾಗಿದೆ. 2004ರಿಂದ 2014ರ ವರೆಗೆ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ಕೆಟ್ಟದಾಗಿ ನಿರ್ವಹಿಸಲಾಗಿದೆ ಎಂದು ಹೇಳಿದರು.

ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದ ಕೊನೆಯ ವರ್ಷದಲ್ಲಿ ಹಣದುಬ್ಬರವು ಶೇ 4ಕ್ಕಿಂತಲೂ ಕಡಿಮೆ ಇತ್ತು. ಕಾಂಗ್ರೆಸ್ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ಅಗತ್ಯ ನಿಯಂತ್ರಣ ಕ್ರಮಕೈಗೊಳ್ಳದಿದ್ದರಿಂದ ಏರಿಕೆಯಾಯಿತು ಎಂದು ದೂರಿದರು.

ಭಾರತವು ತನ್ನ ಆರ್ಥಿಕತೆ ಬೆಳವಣಿಗೆಗೆ ವಿದೇಶಿ ಬಂಡವಾಳವನ್ನು ನೆಚ್ಚಿಕೊಂಡಿರುವ ರಾಷ್ಟ್ರವೆಂಬ ಹಣೆಪಟ್ಟಿ ಹೊಂದಿತ್ತು. ಈಗ ಅದನ್ನು ಕಳಚಿ ಹಾಕಿದ್ದು, ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಶೀಘ್ರವೇ, ಜಾಗತಿಕ ಮಟ್ಟದಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.

ಮೋದಿ ಅವರೇ ಖುದ್ದಾಗಿ ಅಭಿವೃದ್ಧಿ ಯೋಜನೆಗಳ ಪ್ರಗತಿಯ ಪರಿಶೀಲನೆ ನಡೆಸುತ್ತಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.