ನವದೆಹಲಿ: ದೇಶದಲ್ಲಿ ನಿರ್ಮಾಣ ಸಲಕರಣೆಗಳ ಉದ್ಯಮವು ಪ್ರಸಕ್ತ ಹಣಕಾಸು ವರ್ಷದ 2ನೇ ತ್ರೈಮಾಸಿಕದಲ್ಲಿ ಶೇ 31ರಷ್ಟು ಬೆಳವಣಿಗೆ ಕಂಡಿದ್ದು, ಒಟ್ಟು 30,078 ಸಲಕರಣೆಗಳು ಮಾರಾಟವಾಗಿವೆ.
ಭಾರತೀಯ ನಿರ್ಮಾಣ ಸಲಕರಣೆಗಳ ಒಕ್ಕೂಟವು (ಐಸಿಇಎಂಎ) ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, 2022–23ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಉದ್ಯಮವು 22,941 ಸಲಕರಣೆಗಳನ್ನು ಮಾರಾಟ ಮಾಡಿತ್ತು.
ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಮಾರಾಟ ಆಗಿರುವ 30,078 ಸಲಕರಣೆಗಳಲ್ಲಿ 27,423 ರಷ್ಟು ದೇಶದಲ್ಲಿ ಮಾರಾಟ ಆಗಿದೆ. ಉಳಿದ 2,655 ರಫ್ತು ಮಾಡಲಾಗಿದೆ ಎಂದು ತಿಳಿಸಿದೆ.
ಪ್ರಸಕ್ತ ಹಣಕಾಸು ವರ್ಷದ 2ನೇ ತ್ರೈಮಾಸಿಕದಲ್ಲಿ ಮೂಲಸೌಕರ್ಯ ಯೋಜನೆಗಳ ಅನುಷ್ಠಾನವು ವೇಗ ಪಡೆದುಕೊಂಡಿದ್ದರಿಂದ ನಿರ್ಮಾಣ ಸಲಕರಣೆಗಳ ಮಾರಾಟ ಹೆಚ್ಚಳವಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ವಿ.ವಿವೇಕಾನಂದ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.