ನವದೆಹಲಿ: ಆಹಾರ ಉತ್ಪನ್ನಗಳ ದರ ಹೆಚ್ಚಳವಾಗಿರುವುದರಿಂದ ಫೆಬ್ರುವರಿಯಲ್ಲಿ ಚಿಲ್ಲರೆ ಹಣದುಬ್ಬರ ಶೇ 5.03ಕ್ಕೆ ಏರಿಕೆಯಾಗಿರುವುದು ಸರ್ಕಾರ ಬಿಡುಗಡೆ ಮಾಡಿರುವ ಅಂಕಿ–ಅಂಶಗಳಿಂದ ತಿಳಿದು ಬಂದಿದೆ.
ಗ್ರಾಹಕ ದರ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರವು ಜನವರಿಯಲ್ಲಿ ಶೇ 4.06ರಷ್ಟಿತ್ತು. ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಬಿಡುಗಡೆ ಮಾಡಿರುವ ಅಂಕಿ–ಅಂಶಗಳ ಪ್ರಕಾರ, ಹಿಂದೆ ಶೇ 1.89ರಷ್ಟಿದ್ದ ಆಹಾರದ ಬೆಲೆ ಏರಿಕೆ ದರವು ಫೆಬ್ರುವರಿಯಲ್ಲಿ ಶೇ 3.87ರಷ್ಟಾಗಿದೆ.
ಚಿಲ್ಲರೆ ಹಣದುಬ್ಬರದ ಪ್ರಮಾಣದ ಆಧಾರದ ಮೇಲೆ ಆರ್‌ಬಿಐ ಬಡ್ಡಿದರ ಬದಲಿಸುವ ನಿರ್ಧಾರ ತೆಗೆದುಕೊಳ್ಳುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.