ADVERTISEMENT

ನೀರವ್ ಮೋದಿ ಆಸ್ತಿ ಬ್ಯಾಂಕ್‌ಗೆ ಮರಳಿಸಲು ಅನುಮತಿ

ಪಿಟಿಐ
Published 19 ಆಗಸ್ಟ್ 2021, 15:11 IST
Last Updated 19 ಆಗಸ್ಟ್ 2021, 15:11 IST
   

ಮುಂಬೈ: ಜಾರಿ ನಿರ್ದೇಶನಾಲಯ (ಇ.ಡಿ.) ಮುಟ್ಟುಗೋಲು ಹಾಕಿಕೊಂಡಿದ್ದ, ಉದ್ಯಮಿ ನೀರವ್ ಮೋದಿಗೆ ಸೇರಿದ ಒಟ್ಟು ₹ 440 ಕೋಟಿ ಮೌಲ್ಯದ ಆಸ್ತಿಯನ್ನು ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ಗೆ ಮರಳಿಸಲು ವಿಶೇಷ ನ್ಯಾಯಾಲಯವೊಂದು ಅನುಮತಿ ನೀಡಿದೆ.

ನೀರವ್ ಮೋದಿ ಮತ್ತು ಅವರ ಮಾವ ಮೆಹುಲ್ ಚೋಕ್ಸಿ ಅವರು ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ಗೆ ₹ 14 ಸಾವಿರ ಕೋಟಿ ವಂಚಿಸಿದ ಆರೋಪ ಹೊತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿ ರಚಿಸಲಾಗಿರುವ ವಿಶೇಷ ನ್ಯಾಯಾಲಯವು ಈ ಆದೇಶವನ್ನು ಹಿಂದಿನ ವಾರ ನೀಡಿತ್ತು. ಪೂರ್ಣ ಆದೇಶವು ಗುರುವಾರ ಲಭ್ಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.