ನವದೆಹಲಿ: ವಿಶೇಷ ನಗದು ಯೋಜನೆಯಡಿ ₹ 10 ಸಾವಿರ ಕೋಟಿ ನೆರವು ನೀಡುವಂತೆ ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್‌ಬಿಎಫ್‌ಸಿ) ಮತ್ತು ಗೃಹ ಹಣಕಾಸು ಸಂಸ್ಥೆಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ನೆರವಾಗಲು ಜುಲೈ 1ರಂದು ಈ ಯೋಜನೆ ಜಾರಿಗೊಳಿಸಲಾಗಿತ್ತು. ಕೇಂದ್ರ ಸರ್ಕಾರದ ವಿಶೇಷ ಸಾಲಪತ್ರಗಳ ಖಾತರಿಯ ಮೇಲೆ ಆರ್‌ಬಿಐ ನೆರವು ನೀಡಲಿದೆ.
ಎಸ್‌ಬಿಐ ಕ್ಯಾಪಿಟಲ್ ಮಾರ್ಕೇಟ್ ಲಿಮಿಟೆಡ್ (ಎಸ್‌ಬಿಐಸಿಎಪಿ) ನಿರ್ಮಿಸಿರುವ ಟ್ರಸ್ಟ್ ಈ ಸಾಲಪತ್ರಗಳನ್ನು ನೀಡಲಿದೆ.
₹ 9,875 ಕೋಟಿ ನೆರವು ನೀಡುವಂತೆ ‘ಎಸ್‌ಬಿಐ ಸಿಎಪಿ’ಗೆ ಜುಲೈ 7ರಂದು 24 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೊದಲು ಬಂದ ಅರ್ಜಿಗಳಿಗೆ ಒಪ್ಪಿಗೆ ನೀಡಿದ್ದು, ಉಳಿದ ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ ಎಂದೂ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.