ADVERTISEMENT

ಹುಂಡೈ ಕ್ರೆಟಾ ಎನ್‌ ಲೈನ್‌ ಕಾರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 18:13 IST
Last Updated 19 ಮಾರ್ಚ್ 2024, 18:13 IST
ಹುಂಡೈ ಕ್ರೆಟಾ ಎನ್‌ ಲೈನ್‌ ಕಾರು
ಹುಂಡೈ ಕ್ರೆಟಾ ಎನ್‌ ಲೈನ್‌ ಕಾರು   

ಬೆಂಗಳೂರು:ದೇಶದ ಪ್ರಮುಖ ಕಾರು ತಯಾರಿಕಾ ಕಂಪನಿ ಹುಂಡೈ ಮೋಟರ್ಸ್‌ ತನ್ನ ಜನಪ್ರಿಯ ಎಸ್‌ಯುವಿ ಕ್ರೆಟಾದ ಎನ್‌ ಲೈನ್ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. 

ಎನ್‌8 ಆವೃತ್ತಿಯ ಕಾರಿನ ಎಕ್ಸ್ ಷೋರೂಂ ಬೆಲೆ ₹16,82,300 ಹಾಗೂ ಎನ್‌10 ಆವೃತ್ತಿಯ ಕಾರಿನ ಎಕ್ಸ್ ಷೋರೂಂ ಬೆಲೆ ₹19,34,300 ಆಗಿದೆ ಎಂದು ಕಂಪನಿ ತಿಳಿಸಿದೆ. 

‘ಭಾರತದ ಹೊಸ ಖರೀದಿದಾರರ ಬೇಡಿಕೆಗೆ ಅನುಗುಣವಾಗಿ ಈ ಕಾರನ್ನು ತಯಾರಿಸಲಾಗಿದೆ. ಒಳ ವಿನ್ಯಾಸವು ಆಕರ್ಷಕವಾಗಿದೆ. ಈ ಶ್ರೇಣಿಯ ಕಾರುಗಳು ಸುಧಾರಿತ ತಂತ್ರಜ್ಞಾನ ಹೊಂದಿದ್ದು, ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದು ಹುಂಡೈ ಮೋಟರ್‌ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಅನ್ ಸೂ ಕಿಮ್ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.