ಬೆಂಗಳೂರು: ಎಂಜಿನಿಯರಿಂಗ್ ರಫ್ತು ವಲಯದಲ್ಲಿ ಸ್ಥಿರವಾದ ನೈಪುಣ್ಯತೆ ಮತ್ತು ನಾಯಕತ್ವದ ಮೂಲಕ ಉತ್ತಮ ಸಾಧನೆ ತೋರಿರುವ ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸಿಆರ್‌ಐ ಪಂಪ್ಸ್ ಪ್ರೈವೆಟ್ ಲಿಮಿಟೆಡ್, 20ನೇ ಬಾರಿಗೆ ಪ್ರತಿಷ್ಠಿತ ಇಇಪಿಸಿ ಪ್ರಶಸ್ತಿಗೆ ಭಾಜನವಾಗಿದೆ.
ಎಂಜಿನಿಯರಿಂಗ್ ರಫ್ತು ಉತ್ತೇಜನ ಮಂಡಳಿಯು (ಇಇಪಿಸಿ) ಇತ್ತೀಚೆಗೆ ಪುದುಚೇರಿಯಲ್ಲಿ ಆಯೋಜಿಸಿದ್ದ 44ನೇ ಮತ್ತು 45ನೇ ದಕ್ಷಿಣ ವಲಯದ ರಫ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಆರ್‌ಐ ಪಂಪ್ಸ್‌ನ ಮುಖ್ಯ ಮಾರುಕಟ್ಟೆ ಅಧಿಕಾರಿ (ಸಿಎಂಒ) ಆರ್. ಭೂಪತಿ ಅವರಿಗೆ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಜಂಟಿ ಕಾರ್ಯದರ್ಶಿ ವಿಮಲ್ ಆನಂದ್ ಅವರು, ಈ ಪ್ರಶಸ್ತಿ ಪ್ರದಾನ ಮಾಡಿದರು.
‘ಸಿಆರ್‌ಐ ಪಂಪ್‌ಗಳು ಉತ್ತಮ ಗುಣಮಟ್ಟ ಹೊಂದಿವೆ. ಈ ಪ್ರಶಸ್ತಿಯು ಉದ್ಯಮದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲು ಸಹಕಾರಿಯಾಗಿದೆ. ಗ್ರಾಹಕರು ಕಂಪನಿಯ ಮೇಲೆ ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ’ ಎಂದು ಭೂಪತಿ ಪ್ರತಿಕ್ರಿಯಿಸಿದ್ದಾರೆ.
ಕಂಪನಿಯು ಎಂಟು ಬಾರಿ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳನ್ನು ಪಡೆದಿದೆ. ಮಿತ ಇಂಧನ ಬಳಕೆಯಲ್ಲಿ ಮುಂಚೂಣಿಯಲ್ಲಿದೆ. ಕಂಪನಿಯು ‘ಮೇಕ್ ಇನ್ ಇಂಡಿಯಾ’ಗೆ ಬದ್ಧವಾಗಿದೆ. ಈ ಸಾಧನೆಯ ಜೊತೆಗೆ ಹಲವಾರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.