ಬೆಂಗಳೂರು: ದೆಹಲಿ ಸರ್ಕಾರ ಬುಧವಾರ ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಶೇಕಡಾ 30 ರಿಂದ ಶೇ 19.40ಕ್ಕೆ ಇಳಿಕೆ ಮಾಡಿದೆ.
ವ್ಯಾಟ್ ಇಳಿಕೆಯಿಂದಾಗಿ ಪೆಟ್ರೋಲ್ ದರ ಲೀಟರ್‌ಗೆ ₹8 ಕಡಿಮೆಯಾಗಿದೆ. ಬುಧವಾರ ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಕಳೆದ 27 ದಿನಗಳಿಂದ ಇಂಧನ ದರದಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ.
ನವೆಂಬರ್ 4ರಂದು ಕೇಂದ್ರ ಸರ್ಕಾರ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿತ್ತು. ಇದರಿಂದಾಗಿ ದರ ಕಡಿಮೆಯಾಗಿತ್ತು.
ದೆಹಲಿಯಲ್ಲಿ ಈಗ ಪೆಟ್ರೋಲ್ ದರ ಲೀಟರ್‌ಗೆ ₹103.97 ಮತ್ತು ಡೀಸೆಲ್ ಬೆಲೆ ₹86.67 ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.