ನವದೆಹಲಿ: ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘವು (ಎಫ್‌ಕೆಸಿಸಿಐ) ಫೆಬ್ರುವರಿ 25ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಆಯೋಜಿಸಿರುವ ಆಸಿಯಾನ್ ರಾಷ್ಟ್ರಗಳ ವಾಣಿಜ್ಯೋದ್ಯಮ ಒಕ್ಕೂಟಗಳ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ನೇತೃತ್ವದಲ್ಲಿ ಸಂಘದ ನಿಯೋಗ ಮಂಗಳವಾರ ಸಂಸತ್‌ನಲ್ಲಿ ಭೇಟಿ ಮಾಡಿ ನೀಡಿದ ಆಹ್ವಾನಕ್ಕೆ ಪ್ರಧಾನಿ ಸಮ್ಮತಿ ಸೂಚಿಸಿದ್ದಾರೆ.
ಭಾರತ ಮತ್ತು ಆಸಿಯಾನ್ ರಾಷ್ಟ್ರಗಳ ನಡುವಣ ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗುವ ಈ ಸಮಾವೇಶವು, ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಯ ಅವಕಾಶಗಳನ್ನು ಹೆಚ್ಚಿಸಲು ನೆರವಾಗಲಿದೆ ಎಂದು ಪ್ರಧಾನಿಗೆ ತಿಳಿಸಲಾಯಿತು ಎಂದು ಸಂಘದಅಧ್ಯಕ್ಷ ಸುಧಾಕರ ಎಸ್. ಶೆಟ್ಟಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.