ಮುಂಬೈ: ಬ್ಯಾಂಕ್ ಆಫ್ ಬರೋಡಾ ಮತ್ತು ವಿಜಯ ಬ್ಯಾಂಕ್ ಜತೆ ವಿಲೀನಗೊಳ್ಳಲು ದೇನಾ ಬ್ಯಾಂಕ್‌ನ ಆಡಳಿತ ಮಂಡಳಿ ಸೋಮವಾರ ಒಪ್ಪಿಗೆ ಸೂಚಿಸಿದೆ.
ಮೂರು ಬ್ಯಾಂಕ್‌ಗಳನ್ನು ವಿಲೀನಗೊಳಿಸುವ ಮೂಲಕ ದೇಶದಲ್ಲಿ ಮೂರನೇ ಅತಿದೊಡ್ಡ ಬ್ಯಾಂಕ್ ರೂಪಿಸುವುದಾಗಿ ಹಣಕಾಸು ಸಚಿವ ಅರುಣ್ ಜೇಟ್ಲಿ ಕಳೆದವಾರ ಹೇಳಿಕೆ ನೀಡಿದ್ದರು.
ಈ ಕುರಿತು ಬ್ಯಾಂಕ್‌ಗಳ ಆಡಳಿತ ಮಂಡಳಿಗಳು ಸಭೆ ನಡೆಸಿ ವಿಲೀನ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಬೇಕಿದೆ. ಈ ಪ್ರಕ್ರಿಯೆಯಲ್ಲಿ ಮೊದಲನೆಯದಾಗಿ ದೇನಾ ಬ್ಯಾಂಕ್ ತನ್ನ ಒಪ್ಪಿಗೆ ನೀಡಿದೆ.
21 - ಸದ್ಯ ಇರುವ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಸಂಖ್ಯೆ
19 - ಉದ್ದೇಶಿತ ವಿಲೀನದ ಬಳಿಕ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಸಂಖ್ಯೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.