ADVERTISEMENT

‌ನಿಶ್ಚಿತ ಠೇವಣಿ ಬಡ್ಡಿದರ ಇಳಿಕೆ ಸಾಧ್ಯತೆ: ಎಸ್‌ಬಿಐ ಅಧ್ಯಕ್ಷ ದಿನೇಶ್‌ ಖಾರಾ

ಪಿಟಿಐ
Published 13 ಜೂನ್ 2024, 14:23 IST
Last Updated 13 ಜೂನ್ 2024, 14:23 IST
<div class="paragraphs"><p>ಸಾಂಕೇತಿಕ ಚಿತ್ರ&nbsp;</p></div>

ಸಾಂಕೇತಿಕ ಚಿತ್ರ 

   

ನವದೆಹಲಿ: ಪ್ರಸ್ತುತ ವಿವಿಧ ಅವಧಿಯ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಹೆಚ್ಚಿದೆ. ಆದರೆ, ಮುಂಬರುವ ತಿಂಗಳಗಳಲ್ಲಿ ಮಧ್ಯಮ ಪ್ರಮಾಣದಲ್ಲಿ ಕಡಿತಗೊಳಿಸುವ ಸಾಧ್ಯತೆಯಿದೆ’ ಎಂದು ಸರ್ಕಾರಿ ಸ್ವಾಮ್ಯದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ (ಎಸ್‌ಬಿಐ) ಅಧ್ಯಕ್ಷ ದಿನೇಶ್‌ ಖಾರಾ ಹೇಳಿದ್ದಾರೆ.

ಚಿಲ್ಲರೆ ಹಣದುಬ್ಬರವನ್ನು ನಿಯಂತ್ರಿಸುವ ಜೊತೆಗೆ ದೇಶದ ಆರ್ಥಿಕತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಳೆದ ವಾರ ನಡೆದ ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ ಸಭೆಯು, ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. 

ADVERTISEMENT

‘ಅಕ್ಟೋಬರ್‌ ವೇಳೆಗೆ ಚಿಲ್ಲರೆ ಹಣದುಬ್ಬರವು ಆರ್‌ಬಿಐ ನಿಗದಿಪಡಿಸಿರುವ ಶೇ 4ರ ಮಿತಿಗೆ ತಲುಪುವ ಸಾಧ್ಯತೆಯಿದೆ. ಆ ವೇಳೆ ಆರ್‌ಬಿಐ ರೆಪೊ ದರ ಕಡಿತಗೊಳಿಸುವ ಸಾಧ್ಯತೆಯೂ ಇದೆ’ ಎಂದು ಖಾರಾ ಹೇಳಿದ್ದಾರೆ. 

‘ಹಾಗಾಗಿ, ಸದ್ಯ ಹೆಚ್ಚಿರುವ ಠೇವಣಿಗಳ ಮೇಲಿನ ಬಡ್ಡಿದರವನ್ನು ಮಧ್ಯಮ ಪ್ರಮಾಣದಲ್ಲಿ ಕಡಿತಗೊಳಿಸಲು ನಾವು ಎದುರು ನೋಡುತ್ತಿದ್ದೇವೆ’ ಎಂದು ಹೇಳಿದ್ದಾರೆ.

ಈಗಾಗಲೇ, ಮುಂದುವರಿದ ದೇಶಗಳಾದ ಸ್ವಿಡ್ಜರ್ಲೆಂಡ್‌, ಸ್ವೀಡನ್‌, ಕೆನಡಾ ಸೇರಿ ಐರೋಪ್ಯ ಒಕ್ಕೂಟದ ಕೆಲವು ದೇಶಗಳಲ್ಲಿ ಬಡ್ಡಿದರ ಕಡಿತಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಅಮೆರಿಕದ ಫೆಡರಲ್‌ ರಿಸರ್ವ್‌ ಕೂಡ ಬಡ್ಡಿದರ ಕಡಿತಗೊಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ‌

ಕಳೆದ ತಿಂಗಳು ಎಸ್‌ಬಿಐ ಆಯ್ದ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇ 0.75ರ ವರೆಗೆ ಹೆಚ್ಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.