ನವದೆಹಲಿ: ಡಿಜಿಟಲ್ ವಹಿವಾಟಿಗೆ ಸಂಬಂಧಿಸಿದಂತೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿಯೇ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಮೊದಲ ಸ್ಥಾನದಲ್ಲಿದೆ.
ಬ್ಯಾಂಕ್‌ಗಳ ಡಿಜಿಟಲ್ ವಹಿವಾಟಿಗೆ ಸಂಬಂಧಿಸಿದಂತೆಹಣಕಾಸು ಸೇವೆಗಳ ಇಲಾಖೆ ವರದಿಯೊಂದನ್ನು ಸಿದ್ಧಪಡಿಸಿದೆ. ಅದರಂತೆ, ಬಹುಕೋಟಿ ಹಗರಣದಲ್ಲಿ ಸಿಲುಕಿರುವ ‘ಪಿಎನ್‌ಬಿ,ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ‘ಅಗ್ರ ಸ್ಥಾನದಲ್ಲಿದ್ದರೆ, ದೇಶದ ಬ್ಯಾಂಕಿಂಗ್ ವಲಯದಲ್ಲಿ ಆರನೇ ಸ್ಥಾನದಲ್ಲಿದೆ.
ಡಿಜಿಟಲ್ ಇಂಡಿಯಾ ಯೋಜನೆ ಜಾರಿಗೆ ಬ್ಯಾಂಕ್ ಬದ್ಧವಾಗಿದೆ. ಉತ್ತಮ ಪ್ರದರ್ಶನ ನೀಡಿರುವುದರಿಂದ ಕೇಂದ್ರ ಸರ್ಕಾರ 71 ಅಂಕಗಳನ್ನು ನೀಡುವ ಮೂಲಕ ‘ಉತ್ತಮ’ ಸ್ಥಾನವನ್ನೂ ನೀಡಿದೆ ಎಂದು ಹೇಳಿದೆ.
ಒಟ್ಟಾರೆ ವಹಿವಾಟಿನಲ್ಲಿ ಶೇ 0.83 ರಷ್ಟು ಮಾತ್ರವೇ ತಾಂತ್ರಿಕ ಸಮಸ್ಯೆಗಳಿವೆ. ಇದೂ ಸಹ ಒಂದು ಸಾಧನೆಯಾಗಿದೆ ಎಂದು ಹೇಳಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.