ADVERTISEMENT

ನೇರ ತೆರಿಗೆ ಸಂಗ್ರಹ ಹೆಚ್ಚಳ

ಪಿಟಿಐ
Published 14 ಡಿಸೆಂಬರ್ 2018, 18:16 IST
Last Updated 14 ಡಿಸೆಂಬರ್ 2018, 18:16 IST

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ನವೆಂಬರ್‌ ಅವಧಿಯಲ್ಲಿ ನೇರ ತೆರಿಗೆ ಸಂಗ್ರಹದ ಸರಾಸರಿ ಪ್ರಮಾಣ ಶೇ 15.7ರಷ್ಟು ಹೆಚ್ಚಾಗಿದ್ದು, ₹ 6.75 ಲಕ್ಷ ಕೋಟಿಗೆ ತಲುಪಿದೆ.

ಇದೇ ಅವಧಿಯಲ್ಲಿ ₹ 1.23 ಲಕ್ಷ ಕೋಟಿ ಮರುಪಾವತಿ ಮಾಡಲಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಮರುಪಾವತಿಯಲ್ಲಿ ಶೇ 20.8ರಷ್ಟು ವೃದ್ಧಿಯಾಗಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

2018–19ನೇ ಹಣಕಾಸು ವರ್ಷಕ್ಕೆ ₹ 11.50 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹಿಸುವ ಅಂದಾಜು ಇಟ್ಟುಕೊಳ್ಳಲಾಗಿದೆ.

ADVERTISEMENT

***

17.7%

ಕಾರ್ಪೊರೇಟ್‌ ಆದಾಯ ತೆರಿಗೆ ಸಂಗ್ರಹದ ಬೆಳವಣಿಗೆ

18.3 %

ವೈಯಕ್ತಿಕ ಆದಾಯ ತೆರಿಗೆ ಸಂಗ್ರಹದ ಬೆಳವಣಿಗೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.