ಪುಣೆ: ಲಂಡನ್‌ನಲ್ಲಿ ಬಂಧನದಲ್ಲಿರುವ ವಜ್ರದ ಉದ್ಯಮಿ ನೀರವ್ ಮೋದಿ ಹಾಗೂ ಆತನ ಸಹಚರರು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ₹7,200 ಕೋಟಿ ಬಡ್ಡಿ ಪಾವತಿಸಬೇಕು ಎಂದು ಸಾಲ ವಸೂಲಾತಿ ಮಂಡಳಿ ಶನಿವಾರ ನಿರ್ದೇಶನ ನೀಡಿದೆ.
ಮಂಡಳಿಯ ಹೆಚ್ಚುವರಿ ಹೊಣೆ ಹೊತ್ತಿರುವ ದೀಪಕ್ ಠಕ್ಕರ್ ಅವರು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಸಾಲ ಮರುಪಾವತಿಸುವ ಸಂಬಂಧ ಎರಡು ಆದೇಶಗಳನ್ನು ಹೊರಡಿಸಿದರು ಎಂದು ಮಂಡಳಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೀರವ್ ಮೋದಿಯನ್ನು ಮಾರ್ಚ್ 19ರಂದು ಲಂಡನ್‌ನ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.