ADVERTISEMENT

ಕಚ್ಚಾ, ಸಂಸ್ಕರಿಸಿದ ಎಣ್ಣೆ ಮೇಲಿನ ಸುಂಕ ಏರಿಕೆ

ಪಿಟಿಐ
Published 14 ಸೆಪ್ಟೆಂಬರ್ 2024, 14:22 IST
Last Updated 14 ಸೆಪ್ಟೆಂಬರ್ 2024, 14:22 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಚ್ಚಾ ತಾಳೆ ಎಣ್ಣೆ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಕಸ್ಟಮ್ಸ್‌ ಸುಂಕವನ್ನು ಹೆಚ್ಚಿಸಿದೆ.

ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಿಸಿರುವ ಅಧಿಸೂಚನೆ ಪ್ರಕಾರ ಕಚ್ಚಾ ತಾಳೆ, ಸೋಯಾಬಿನ್‌ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇ 20ರಷ್ಟು ಹೆಚ್ಚಿಸಲಾಗಿದೆ.

ಸಂಸ್ಕರಿಸಿದ ತಾಳೆ, ಸೋಯಾಬಿನ್‌ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ 12.5ರಿಂದ ಶೇ 32.5ಕ್ಕೆ ಏರಿಕೆ ಮಾಡಿದೆ. 

ADVERTISEMENT

‘ಸೋಯಾಬಿನ್‌ ಹಾಗೂ ಎಣ್ಣೆಕಾಳು ಬೆಳೆಯುವ ರೈತರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಮಹಾರಾಷ್ಟ್ರ ಮತ್ತು ಮಧ್ರಪ್ರದೇಶದ ರೈತರಿಗೆ ಹೆಚ್ಚು ಪ್ರಯೋಜನ ದೊರೆಯಲಿದೆ’ ಎಂದು ಸರ್ಕಾರ ಹೇಳಿದೆ.

ಅಲ್ಲದೆ, ಎಣ್ಣೆಕಾಳು ಬೆಳೆಯುವ ಗುಜರಾತ್‌, ರಾಜಸ್ಥಾನ, ಕರ್ನಾಟಕ, ಆಂಧ್ರಪ್ರದೇಶ, ಉತ್ತರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ರೈತರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದೆ.

ಕಳೆದ ಎರಡು ವರ್ಷದಿಂದ ದೇಶೀಯವಾಗಿ ಉತ್ಪಾದನೆಯಾಗುವ ಖಾದ್ಯ ತೈಲದ ಬೆಲೆ ಇಳಿಕೆಯಾಗುತ್ತಿದೆ. ಹಾಗಾಗಿ, ಬೆಲೆ ನಿರ್ವಹಣೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.