ನವದೆಹಲಿ: ‘ದೇಶದ ಆರ್ಥಿಕತೆಯು ಮಂದಗತಿಯ ಬೆಳವಣಿಗೆ ಕಾಣುತ್ತಿರುವುದು ಅತ್ಯಂತ ಕಳವಳಕಾರಿಯಾದ ಸಂಗತಿಯಾಗಿದೆ’ ಎಂದು ಆರ್‌ಬಿಐನ ಮಾಜಿ ಗವರ್ನರ್ ರಘುರಾಂ ರಾಜನ್ ಹೇಳಿದ್ದಾರೆ.
‘ವಿದ್ಯುತ್ ಮತ್ತು ಬ್ಯಾಂಕೇತರ ಹಣಕಾಸು ವಲಯಗಳಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸುವ ಅಗತ್ಯ ಇದೆ. ಖಾಸಗಿ ಹೂಡಿಕೆಯನ್ನು ಉತ್ತೇಜಿಸಲು ಹೊಸ ರೀತಿಯ ಸುಧಾರಣಾ ಕ್ರಮಗಳನ್ನು ತುರ್ತಾಗಿ ಜಾರಿಗೊಳಿಸಬೇಕಾಗಿದೆ’ಎಂದು ಅವರು ಸಲಹೆ ನೀಡಿದ್ದಾರೆ.
‘ಖಾಸಗಿ ವಲಯದ ವಿಶ್ಲೇಷಕರು ಆರ್ಥಿಕ ಪ್ರಗತಿಯ ಬಗ್ಗೆ ವಿವಿಧ ರೀತಿಯಲ್ಲಿ ಅಂದಾಜು ಮಾಡಿದ್ದಾರೆ. ಇವೆಲ್ಲವೂ ಸರ್ಕಾರ ಮಾಡಿರುವ ಅಂದಾಜಿಗಿಂತಲೂ ಕಡಿಮೆ ಮಟ್ಟದಲ್ಲಿದೆ’ ಎಂದು ಸಿಎನ್‌ಬಿಸಿ ಟಿವಿ18ಗೆ ತಿಳಿಸಿದ್ದಾರೆ.
2018–19ರಲ್ಲಿ ಜಿಡಿಪಿ ಶೇ 6.8ಕ್ಕೆ ಇಳಿಕೆಯಾಗಿದೆ. ಇದು 2014–15ರ ನಂತರ ಅತ್ಯಂತ ಕನಿಷ್ಠ ಮಟ್ಟದ ಪ್ರಗತಿಯಾಗಿದೆ.
ಕೇಂದ್ರೀಯ ಬ್ಯಾಂಕ್ ಮತ್ತು ವಿವಿಧ ಖಾಸಗಿ ವಲಯದ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯು ಸರ್ಕಾರ ಮಾಡಿರುವ ಶೇ 7ಕ್ಕಿಂತಲೂ ಕಡಿಮೆ ಇರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.