ADVERTISEMENT

ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪ: ಇ.ಡಿಯಿಂದ ಅನಿಲ್‌ ಅಂಬಾನಿ ವಿಚಾರಣೆ

ಪಿಟಿಐ
Published 3 ಜುಲೈ 2023, 23:20 IST
Last Updated 3 ಜುಲೈ 2023, 23:20 IST
ಅನಿಲ್‌ ಅಂಬಾನಿ (ಸಾಂದರ್ಭಿಕ ಚಿತ್ರ)
ಅನಿಲ್‌ ಅಂಬಾನಿ (ಸಾಂದರ್ಭಿಕ ಚಿತ್ರ)   

ಮುಂಬೈ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ) ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ರಿಲಯನ್ಸ್‌ ಎಡಿಎ ಸಮೂಹದ ಮುಖ್ಯಸ್ಥ ಅನಿಲ್‌ ಅಂಬಾನಿ ಅವರು ಸೋಮವಾರ ಜಾರಿ ನಿರ್ದೇಶನಾಲಯದ (ಇ.ಡಿ) ಇಲ್ಲಿನ ಕಚೇರಿ ಎದುರು ಹಾಜರಾಗಿ ವಿಚಾರಣೆ ಎದುರಿಸಿದ್ದು, ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯೆಸ್‌ ಬ್ಯಾಂಕ್‌ ಪ್ರವರ್ತಕ ರಾಣಾ ಕಪೂರ್‌ ಮತ್ತಿತರರ ವಿರುದ್ಧ ದಾಖಲಾಗಿದ್ದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಲ್ಲಿ ಅನಿಲ್‌ ಅಂಬಾನಿ ಇ.ಡಿ ವಿಚಾರಣೆ ಎದುರಿಸಿದ್ದರು.

 ₹420 ಕೋಟಿ ತೆರಿಗೆ ವಂಚನೆ ಪ್ರಕರಣ ಸಂಬಂಧ ಕಳೆದ ವರ್ಷ ಆದಾಯ ತೆರಿಗೆ ಇಲಾಖೆಯು ಅನಿಲ್ ಅಂಬಾನಿ ಅವರಿಗೆ ನೋಟಿಸ್‌ ಜಾರಿ ಮಾಡಿತ್ತು. ಕಳೆದ ಮಾರ್ಚ್‌ ತಿಂಗಳಿನಲ್ಲಿ ಬಾಂಬೆ ಹೈಕೋರ್ಟ್‌  ಷೋಕಾಸ್‌ ನೋಟಿಸ್‌ ಮತ್ತು ದಂಡಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತ್ತು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.