ADVERTISEMENT

ಇ.ಡಿಯಿಂದ ಪೇಟಿಎಂ ಬ್ಯಾಂಕ್‌ ದಾಖಲೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2024, 15:43 IST
Last Updated 15 ಫೆಬ್ರುವರಿ 2024, 15:43 IST
<div class="paragraphs"><p>&nbsp;ಪೇಟಿಎಂ&nbsp;&nbsp;</p></div>

 ಪೇಟಿಎಂ  

   

ನವದೆಹಲಿ: ಪೇಟಿಎಂ ಪೇಮೆಂಟ್ ಬ್ಯಾಂಕ್‌ ಲಿಮಿಟೆಡ್‌ (ಪಿಪಿಬಿಎಲ್‌) ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿ ಔಪಚಾರಿಕ ತನಿಖೆ ಆರಂಭಿಸುವುದಕ್ಕೂ ಮೊದಲು ಜಾರಿ ನಿರ್ದೇಶನಾಲಯವು (ಇ.ಡಿ) ದಾಖಲೆಗಳ ಪ್ರಾಥಮಿಕ ಪರಿಶೀಲನೆ ನಡೆಸುತ್ತಿದೆ.  

ಫೆಬ್ರುವರಿ 29ರ ನಂತರ ಎಲ್ಲ ಬಗೆಯ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಪಿಪಿಬಿಎಲ್‌ಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ ನಿರ್ಬಂಧ ಹೇರಿದೆ. ಇ.ಡಿ ಅಧಿಕಾರಿಗಳು ಈ ಕುರಿತ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದು, ಪೇಟಿಎಂನ ಹಿರಿಯ ಕಾರ್ಯ ನಿರ್ವಾಹಕರನ್ನು ಪ್ರಶ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಇ.ಡಿ ಕೇಳಿದ ಕೆಲವು ದಾಖಲೆಗಳನ್ನು ಕಾರ್ಯ ನಿರ್ವಾಹಕರು ಸಲ್ಲಿಸಿದ್ದಾರೆ. ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿವೆ.

ನಿಯಮಾವಳಿಗಳು ಉಲ್ಲಂಘನೆಯಾಗಿರುವುದು ಕಂಡುಬಂಡರೆ ಫೆಮಾ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ. ಸದ್ಯ ಇಲ್ಲಿಯವರೆಗೂ ಅಕ್ರಮಗಳು ಪತ್ತೆಯಾಗಿಲ್ಲ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿಯೂ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.