ನವದೆಹಲಿ: ಕಾರ್ಮಿಕರ ರಾಜ್ಯ ವಿಮಾ ನಿಗಮದ (ಇಎಸ್‌ಐಸಿ) ಇಎಸ್ಐ ಯೋಜನೆಯಡಿ ಆಗಸ್ಟ್ ತಿಂಗಳಿನಲ್ಲಿ ಹೊಸದಾಗಿ 20.74 ಲಕ್ಷ ಉದ್ಯೋಗಿಗಳು ನೋಂದಣಿಯಾಗಿದ್ದಾರೆ.
ಕಳೆದ ವರ್ಷದ ಇದೇ ತಿಂಗಳಿನಲ್ಲಿ 19.42 ಲಕ್ಷ ಉದ್ಯೋಗಿಗಳು ನೋಂದಣಿಯಾಗಿದ್ದರು. ಇದಕ್ಕೆ ಹೋಲಿಸಿದರೆ ಸದಸ್ಯರ ಸಂಖ್ಯೆಯಲ್ಲಿ ಶೇ 6.8ರಷ್ಟು ಏರಿಕೆಯಾಗಿದೆ. ಈ ಪೈಕಿ 25 ವಯೋಮಾನದವರ ಸಂಖ್ಯೆ 9.89 ಲಕ್ಷಷ್ಟಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ತಿಳಿಸಿದೆ.
ಈ ತಿಂಗಳಿನಲ್ಲಿ ದೇಶದಾದ್ಯಂತ ಇಎಸ್‌ಐ ಯೋಜನೆಯ ಸಾಮಾಜಿಕ ಭದ್ರತಾ ವ್ಯಾಪ್ತಿಗೆ ಹೊಸದಾಗಿ 28,917 ಕಂಪನಿಗಳು ಸೇರ್ಪಡೆಯಾಗಿವೆ. ಇದರಿಂದ ಹೆಚ್ಚು ನೌಕರರಿಗೆ ಸಾಮಾಜಿಕ ಭದ್ರತೆ ಸಿಕ್ಕಿದೆ ಎಂದು ತಿಳಿಸಿದೆ.
60 ಲಿಂಗತ್ವ ಅಲ್ಪಸಂಖ್ಯಾತರು ಇಎಸ್‌ಐ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.