ಮುಂಬೈ: ಏಪ್ರಿಲ್ 1ರಂದು ಬ್ಯಾಂಕ್‌ಗಳು ವಾರ್ಷಿಕ ಲೆಕ್ಕಗಳನ್ನು ಪೂರ್ಣಗೊಳಿಸುತ್ತವೆ. ಹಾಗಾಗಿ, ಅಂದು ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ಹಾಗಾಗಿ, ಅಂದು ಮಾತ್ರ ₹2,000 ಮುಖಬೆಲೆಯ ನೋಟುಗಳ ವಿನಿಮಯ ಇರುವುದಿಲ್ಲ. ಏಪ್ರಿಲ್ 2ರಿಂದ ಎಂದಿನಂತೆ ವಿನಿಮಯ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ತಿಳಿಸಿದೆ.
ಫೆಬ್ರುವರಿ 29ರ ಅಂತ್ಯಕ್ಕೆ ₹2 ಸಾವಿರ ಮುಖಬೆಲೆಯ ಶೇ 97.62ರಷ್ಟು ನೋಟುಗಳು ಬ್ಯಾಂಕ್‌ಗಳಿಗೆ ಮರಳಿದ್ದರೆ, ₹8,470 ಕೋಟಿ ಮೌಲ್ಯದ ನೋಟುಗಳು ಇನ್ನೂ ಜನರ ಬಳಿ ಇವೆ ಎಂದು ತಿಳಿಸಿದೆ.
ಬ್ಯಾಂಕ್‌ಗಳಲ್ಲಿ ಠೇವಣಿ ಇಡಲು ಹಾಗೂ ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿಕೊಳ್ಳುವುದಕ್ಕೆ 19 ಪ್ರಾದೇಶಿಕ ಕಚೇರಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಂಚೆ ಮೂಲಕವೂ ಈ ಕಚೇರಿಗಳಿಗೆ ನೋಟುಗಳನ್ನು ಕಳುಹಿಸಿ ಬದಲಾಯಿಸಿಕೊಳ್ಳಲು ಅವಕಾಶವಿದೆ ಎಂದು ಆರ್‌ಬಿಐ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.