ನವದೆಹಲಿ: ತೆರಿಗೆದಾರರು ವಿದೇಶದಲ್ಲಿ ಹೊಂದಿರುವ ಸ್ವತ್ತುಗಳು ಮತ್ತು ಆದಾಯದ ಬಗ್ಗೆ ಘೋಷಿಸಲು ವಿಫಲವಾದರೆ ಅಂತಹವರಿಗೆ ಕಪ್ಪುಹಣ ತಡೆ ಕಾಯ್ದೆಯಡಿ ₹10 ಲಕ್ಷ ದಂಡ ವಿಧಿಸಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
2024–25ನೇ ಮೌಲ್ಯಮಾಪನ ವರ್ಷದಲ್ಲಿ ಸಲ್ಲಿಸಿರುವ ಐಟಿಆರ್‌ಗಳಲ್ಲಿ ವಿದೇಶಿ ಸ್ವತ್ತು ಅಥವಾ ಆದಾಯ ಕುರಿತು ಘೋಷಣೆ ಮಾಡದಿರುವ ತೆರಿಗೆದಾರರಿಗೆ ಸಂದೇಶ ರವಾನಿಸಲು ಅಭಿಯಾನ ಆರಂಭಿಸಲಾಗಿದೆ. ಇದರ ಭಾಗವಾಗಿ ಇಲಾಖೆಯು ಸಾರ್ವಜನಿಕರಿಗೆ ತಿಳಿವಳಿಕೆ ನೀಡುವ ಮಾಹಿತಿ ಪ್ರಕಟಿಸಿದೆ.
ವಿದೇಶದಲ್ಲಿ ಬ್ಯಾಂಕ್ ಖಾತೆ, ವಿಮಾ ಒಪ್ಪಂದ, ಕಂಪನಿ ಅಥವಾ ವ್ಯವಹಾರದಲ್ಲಿನ ಬಡ್ಡಿ, ಸ್ಥಿರಾಸ್ತಿ, ಕಸ್ಟೋಡಿಯಲ್ ಖಾತೆ, ಟ್ರಸ್ಟಿ, ಷೇರು ಮತ್ತು ಸಾಲಪತ್ರಕ್ಕೆ ಲಭಿಸಿರುವ ಬಡ್ಡಿ ಇತ್ಯಾದಿಯನ್ನು ವಿದೇಶಿ ಸ್ವತ್ತು ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿದೆ.
2024–25ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ವಿಳಂಬ ಹಾಗೂ ಪರಿಷ್ಕೃತ ಐಟಿಆರ್ ಸಲ್ಲಿಕೆಗೆ ಡಿಸೆಂಬರ್ 31ರಂದು ಅಂತಿಮ ದಿನವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.