ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯು ಇಡೀ ವರ್ಷದ ಗುರಿಯ ಶೇ 29.4ರಷ್ಟು ಆಗಿದೆ.
ವರಮಾನ ಮತ್ತು ವೆಚ್ಚದ ನಡುವಣ ಅಂತರವಾದ ವಿತ್ತೀಯ ಕೊರತೆಯು ಸೆಪ್ಟೆಂಬರ್ ಅಂತ್ಯಕ್ಕೆ ₹4.74 ಲಕ್ಷ ಕೋಟಿಯಷ್ಟಿದೆ ಎಂದು ಲೆಕ್ಕಪತ್ರಗಳ ಮಹಾನಿಯಂತ್ರಕರು (ಸಿಜಿಎ) ಬುಧವಾರ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.
2023–24ನೇ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯು ಶೇ 5.6ರಷ್ಟಿತ್ತು. 2024–25ನೇ ಆರ್ಥಿಕ ವರ್ಷದಲ್ಲಿ ಇದನ್ನು ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಶೇ 4.9ಕ್ಕೆ ತಗ್ಗಿಸಲು ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಗುರಿ ನಿಗದಿಪಡಿಸಿದೆ. ಮೌಲ್ಯದ ಲೆಕ್ಕದಲ್ಲಿ ಇದು ₹16.13 ಲಕ್ಷ ಕೋಟಿ ಆಗಿದೆ.
ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಒಟ್ಟು ₹12.65 ಲಕ್ಷ ಕೋಟಿ ನಿವ್ವಳ ತೆರಿಗೆ ವರಮಾನ ಸಂಗ್ರಹವಾಗಿದೆ. ಇದೇ ಅವಧಿಯಲ್ಲಿ ಸರ್ಕಾರದ ವೆಚ್ಚವು ₹21.11 ಲಕ್ಷ ಕೋಟಿ ಆಗಿದೆ. ಇದು ಬಜೆಟ್ ಅಂದಾಜಿನ ಶೇ 43.8ರಷ್ಟು ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.