ನವದೆಹಲಿ: ಕೇಂದ್ರ ಸರ್ಕಾರದ ವಿತ್ತೀಯ ಕೊರತೆಯು 2023–24ರ ಏಪ್ರಿಲ್–ಅಕ್ಟೋಬರ್ ಅವಧಿಗೆ ಬಜೆಟ್ ಅಂದಾಜಿನ ಶೇ 45ರಷ್ಟು ಆಗಿದೆ ಎಂದು ಲೆಕ್ಕಪತ್ರಗಳ ಮಹಾನಿಯಂತ್ರಕರು (ಸಿಜಿಎ) ಬಿಡುಗಡೆ ಮಾಡಿರುವ ಅಂಕಿ–ಅಂಶಗಳು ಹೇಳಿವೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಶೇ 45.6ರಷ್ಟು ಆಗಿತ್ತು.
ವರಮಾನ ಮತ್ತು ವೆಚ್ಚದ ನಡುವಣ ಅಂತರವಾದ ವಿತ್ತೀಯ ಕೊರತೆಯು 2023–24ರ ಏಪ್ರಿಲ್–ಅಕ್ಟೋಬರ್ ಅವಧಿಯು ಮೌಲ್ಯದ ಲೆಕ್ಕದಲ್ಲಿ ₹8.03 ಲಕ್ಷ ಕೋಟಿಯಷ್ಟು ಆಗಿದೆ.
2023–24ನೇ ಹಣಕಾಸು ವರ್ಷಕ್ಕೆ ವಿತ್ತೀಯ ಕೊರತೆಯು ಜಿಡಿಪಿಯ ಶೇ 5.9ರಷ್ಟು (₹17.86 ಲಕ್ಷ ಕೋಟಿ) ಆಗಬಹುದು ಎನ್ನುವ ಅಂದಾಜನ್ನು ಸರ್ಕಾರ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.