ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಆದೇಶಿಸಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂಬ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ಸಂಸ್ಥೆಗಳು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದವು.
'ಸಿಸಿಐ ಆದೇಶಿಸಿರುವ ತನಿಖೆಯು ಅಂತಿಮ ಹಂತಕ್ಕೆ ತಲುಪದಂತೆ ತಡೆಯೊಡ್ಡಲು ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ಮೇಲ್ಮನವಿಯನ್ನು ಸಲ್ಲಿಸಿವೆ. ಈ ಮೇಲ್ಮನವಿಗಳು ವಜಾಗೊಳಿಸಲು ಅರ್ಹವಾಗಿವೆ' ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಸ್ಪರ್ಧಾತ್ಮಕ ವಿರೋಧಿ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಸ್ಪರ್ಧಾತ್ಮಕ ಕಾಯ್ದೆ –2020 ಅನ್ನು ಈ ಸಂಸ್ಥೆಗಳು ಉಲ್ಲಂಘಿಸುತ್ತಿವೆ ಎಂಬ ಆರೋಪದಲ್ಲಿ ಸಿಸಿಐ ತನಿಖೆಗೆ ಆದೇಶಿಸಿತ್ತು. ದೆಹಲಿಯ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಸಂಘಟನೆಯಾದ ದೆಹಲಿ ವ್ಯಾಪಾರ ಮಹಾಸಂಘದ ಮಾಹಿತಿ ಆಧರಿಸಿ ಈ ತನಿಖೆಗೆ ಸಿಸಿಐ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ಸಂಸ್ಥೆಗಳು 2020 ಜನವರಿ 13ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ಏಕ ಸದಸ್ಯ ಪೀಠ ಈ ಅರ್ಜಿ ವಜಾಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.