ನವದೆಹಲಿ: ಭಾರತದ ಷೇರುಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ (ಎಫ್‌ಪಿಐ) ಪ್ರಮಾಣವು 2023ರ ಮಾರ್ಚ್ ತ್ರೈಮಾಸಿಕದಲ್ಲಿ ಶೇ 11ರಷ್ಟು ಇಳಿಕೆ ಆಗಿ ₹44.65 ಲಕ್ಷ ಕೋಟಿಗೆ ತಲುಪಿದೆ ಎಂದು ಮಾರ್ನಿಂಗ್‌ಸ್ಟಾರ್ ವರದಿ ಹೇಳಿದೆ.
2022ರ ಮಾರ್ಚ್ ತ್ರೈಮಾಸಿಕದಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು ಭಾರತದ ಷೇರುಗಳಲ್ಲಿ ₹50.43 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಿದ್ದರು.
ಹೂಡಿಕೆಯಲ್ಲಿ ಇಳಿಕೆ ಆಗಿರುವುದರಿಂದ ಭಾರತದ ಷೇರು ಮಾರುಕಟ್ಟೆಯ ಬಂಡವಾಳ ಮೌಲ್ಯದಲ್ಲಿ ಎಫ್‌ಪಿಐ ಕೊಡುಗೆಯು ಶೇ 17.8 ರಿಂದ ಶೇ 17.3ಕ್ಕೆ ಇಳಿಕೆ ಆಗಿದೆ.
ವಿದೇಶಿ ಹೂಡಿಕೆದಾರರು 2021–22ರಲ್ಲಿ ಭಾರತದ ಷೇರುಪೇಟೆಗಳಿಂದ ದಾಖಲೆ ಪ್ರಮಾಣದಲ್ಲಿ ಬಂಡವಾಳ ಹಿಂದಕ್ಕೆ ಪಡೆದಿದ್ದರು. ಭಾರತದ ಕೇಂದ್ರೀಯ ಬ್ಯಾಂಕ್ ಬಡ್ಡಿದರವನ್ನು ಹೆಚ್ಚಳ ಮಾಡಿದ್ದರಿಂದಾಗಿ 2022–23ರಲ್ಲಿಯೂ ಮಾರಾಟಕ್ಕೆ ಹೆಚ್ಚು ಗಮನ ನೀಡಿದರು. ₹37,631 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ.
ವಿದೇಶಿ ಹೂಡಿಕೆದಾರರು ಭಾರತದಲ್ಲಿ 1993ರಿಂದ ಬಂಡವಾಳ ತೊಡಗಿಸಲು ಆರಂಭಿಸಿದ್ದು, ಸತತ ಎರಡು ತ್ರೈಮಾಸಿಕಗಳಲ್ಲಿ ಬಂಡವಾಳ ಹಿಂದಕ್ಕೆ ಪಡೆದಿರುವುದು ಇದೇ ಮೊದಲು.
ಭಾರತದ ಷೇರುಪೇಟೆಯ ಮಾರುಕಟ್ಟೆ ಮೌಲ್ಯವು ಗರಿಷ್ಠ ಮಟ್ಟದಲ್ಲಿ ಇದ್ದಿದ್ದು ಸಹ ಬಂಡವಾಳ ಹೊರಹರಿವಿಗೆ ಒಂದು ಪ್ರಮುಖ ಕಾರಣವಾಗಿದೆ ಎಂದು ಮಾರ್ನಿಂಗ್‌ಸ್ಟಾರ್ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.
ಅಂಕಿ–ಅಂಶ
ಎಫ್‌ಪಿಐ ಹೊರಹರಿವು: 1.4 ಲಕ್ಷ ಕೋಟಿ
2021–22ರಲ್ಲಿ: ₹37,632 ಕೋಟಿ
2022–23ರಲ್ಲಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.