ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಆಗಸ್ಟ್ 23ಕ್ಕೆ ಕೊನೆಗೊಂಡ ವಾರದಲ್ಲಿ ₹58,881 ಕೋಟಿ ಹೆಚ್ಚಳವಾಗಿದೆ.
ಒಟ್ಟು ಮೀಸಲು ಸಂಗ್ರಹವು ದಾಖಲೆಯ ₹57.15 ಲಕ್ಷ ಕೋಟಿಗೆ ತಲುಪಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತಿಳಿಸಿದೆ.
ವಿದೇಶಿ ಕರೆನ್ಸಿಗಳ ಸಂಗ್ರಹವು ₹50,159 ಕೋಟಿ ಹೆಚ್ಚಳವಾಗಿದ್ದು, ಒಟ್ಟು ಸಂಗ್ರಹ ಮೊತ್ತ ₹50 ಲಕ್ಷ ಕೋಟಿ ಆಗಿದೆ. ಚಿನ್ನದ ಮೀಸಲು ಸಂಗ್ರಹದ ಮೌಲ್ಯವು ₹7,486 ಕೋಟಿಗೆ ಏರಿಕೆಯಾಗಿದೆ. ಸ್ಪೆಷಲ್ ಡ್ರಾಯಿಂಗ್ ರೈಟ್ಸ್ (ಎಸ್‌ಡಿಆರ್) ಮೀಸಲು ₹989 ಕೋಟಿ ಏರಿಕೆಯಾಗಿ, ₹1.54 ಲಕ್ಷ ಕೋಟಿಗೆ ತಲುಪಿದೆ.
ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್) ಭಾರತದ ಮೀಸಲು ಸಂಗ್ರಹವು ₹251 ಕೋಟಿ ಹೆಚ್ಚಳವಾಗಿದ್ದು, ಒಟ್ಟು ಸಂಗ್ರಹ ಮೊತ್ತ ₹39,234 ಕೋಟಿಗೆ ಮುಟ್ಟಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.