ಮುಂಬೈ: ವಿದೇಶಿ ವಿನಿಮಯ ಮೀಸಲು ಸಂಗ್ರಹವು ಅಕ್ಟೋಬರ್ 21ಕ್ಕೆ ಕೊನೆಗೊಂಡ ವಾರದಲ್ಲಿ ₹31,656 ಕೋಟಿಯಷ್ಟು ಕಡಿಮೆ ಆಗಿದ್ದು, ₹43.17 ಲಕ್ಷ ಕೋಟಿಗೆ ತಲುಪಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ ತಿಳಿಸಿದೆ.
ಮೀಸಲು ಸಂಗ್ರಹದಲ್ಲಿ ವಿದೇಶಿ ಕರೆನ್ಸಿಗಳು ಹೆಚ್ಚಿನ ಪಾಲು ಹೊಂದಿವೆ. ಆದರೆ, ಅಕ್ಟೋಬರ್ 21ಕ್ಕೆ ಕೊನೆಗೊಂಡ ವಾರದಲ್ಲಿ ವಿದೇಶಿ ಕರೆನ್ಸಿಗಳ ಸಂಗ್ರಹವು ₹29,595 ಕೋಟಿಯಷ್ಟು ಕಡಿಮೆ ಆಗಿದೆ. ಹೀಗಾಗಿ ದೇಶದ ಒಟ್ಟಾರೆ ಮೀಸಲು ಸಂಗ್ರಹದಲ್ಲಿ ಇಳಿಕೆ ಕಂಡುಬಂದಿದೆ ಎಂದು ಅದು ಹೇಳಿದೆ.
ಚಿನ್ನದ ಮೀಸಲು ಸಂಗ್ರಹ ₹2,036 ಕೋಟಿ ಕಡಿಮೆ ಆಗಿ ₹3.06 ಲಕ್ಷ ಕೋಟಿಗೆ ಇಳಿಕೆ ಕಂಡಿದೆ.
ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿ (ಐಎಂಎಫ್) ಇರುವ ಭಾರತದ ಮೀಸಲು ಸಂಗ್ರಹವು ₹115 ಕೋಟಿಯಷ್ಟು ಕಡಿಮೆ ಆಗಿ ₹39,488 ಕೋಟಿಯಷ್ಟಾಗಿದೆ ಎಂದು ಆರ್‌ಬಿಐ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.