ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಹಲವು ವಾರಗಳ ಬಳಿಕ ಏರಿಕೆ ಕಂಡಿದೆ. ಅಕ್ಟೋಬರ್ 13ಕ್ಕೆ ಕೊನೆಗೊಂಡ ವಾರದಲ್ಲಿ ₹9,545 ಕೋಟಿ ಹೆಚ್ಚಾಗಿ ₹48.63 ಲಕ್ಷ ಕೋಟಿಗೆ ತಲುಪಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.
ಅಕ್ಟೋಬರ್ 6ಕ್ಕೆ ಕೊನೆಗೊಂಡ ವಾರದಲ್ಲಿ ಮೀಸಲು ಸಂಗ್ರಹವು ₹48.55 ಲಕ್ಷ ಕೋಟಿಯಷ್ಟು ಇತ್ತು.
ಮೀಸಲು ಸಂಗ್ರಹದಲ್ಲಿ ಹೆಚ್ಚಿನ ಪಾಲು ಹೊಂದಿರುವ ವಿದೇಶಿ ಕರೆನ್ಸಿಗಳ ಸಂಗ್ರಹವು ಅಕ್ಟೋಬರ್ 13ಕ್ಕೆ ಕೊನೆಗೊಂಡ ವಾರದಲ್ಲಿ ₹1480 ಕೋಟಿಯಷ್ಟು ಕಡಿಮೆ ಆಗಿ ₹43.07 ಲಕ್ಷ ಕೋಟಿಗೆ ಇಳಿಕೆ ಕಂಡಿದೆ.
ಚಿನ್ನದ ಮೀಸಲು ಸಂಗ್ರಹವು ₹10,458 ಕೋಟಿ ಹೆಚ್ಚಾಗಿ ₹3.61 ಲಕ್ಷ ಕೋಟಿಗೆ ತಲುಪಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ ಭಾರತದ ಮೀಸಲು ಸಂಗ್ರಹವು ₹66 ಕೋಟಿಯಷ್ಟು ಇಳಿಕೆ ಕಂಡಿದ್ದು ₹41,251 ಕೋಟಿಯಷ್ಟು ಆಗಿದೆ ಎಂದು ಆರ್‌ಬಿಐ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.