ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಜುಲೈ 5ಕ್ಕೆ ಕೊನೆಗೊಂಡ ವಾರದಲ್ಲಿ ₹43,081 ಕೋಟಿ ಹೆಚ್ಚಳವಾಗಿದೆ.
ಒಟ್ಟು ಮೀಸಲು ಸಂಗ್ರಹವು ₹54.88 ಲಕ್ಷ ಕೋಟಿಗೆ ತಲುಪಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತಿಳಿಸಿದೆ.
ವಿದೇಶಿ ಕರೆನ್ಸಿಗಳ ಸಂಗ್ರಹವು ₹35,313 ಕೋಟಿ ಹೆಚ್ಚಳವಾಗಿದ್ದು, ಒಟ್ಟು ಸಂಗ್ರಹ ಮೊತ್ತ ₹48.20 ಲಕ್ಷ ಕೋಟಿ ಆಗಿದೆ.
ಚಿನ್ನದ ಮೀಸಲು ಸಂಗ್ರಹವು ₹7,550 ಕೋಟಿ ಏರಿಕೆಯಾಗಿದೆ. ಸ್ಪೆಷಲ್ ಡ್ರಾಯಿಂಗ್ ರೈಟ್ಸ್ (ಎಸ್‌ಡಿಆರ್) ಮೀಸಲು ₹175 ಕೋಟಿ ಏರಿಕೆಯಾಗಿ ₹1.50 ಲಕ್ಷ ಕೋಟಿಗೆ ತಲುಪಿದೆ.
ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್) ಭಾರತದ ಮೀಸಲು ಸಂಗ್ರಹವು ₹33 ಕೋಟಿ ಹೆಚ್ಚಳವಾಗಿದ್ದು, ಒಟ್ಟು ಸಂಗ್ರಹ ಮೊತ್ತ ₹38,244 ಕೋಟಿಗೆ ಮುಟ್ಟಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.