ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಡಿಸೆಂಬರ್ 9ಕ್ಕೆ ಕೊನೆಗೊಂಡ ವಾರದಲ್ಲಿ ₹24,674 ಕೋಟಿಯಷ್ಟು ಹೆಚ್ಚಾಗಿದ್ದು, ಒಟ್ಟಾರೆ ಮೀಸಲು ಸಂಗ್ರಹವು ₹46.69 ಲಕ್ಷ ಕೋಟಿಗೆ ಏರಿಕೆ ಆಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ ಹೇಳಿದೆ.
ಅದಕ್ಕೂ ಹಿಂದಿನ ವಾರ ಮೀಸಲು ಸಂಗ್ರಹವು ₹46.45 ಲಕ್ಷ ಕೋಟಿಯಷ್ಟು ಇತ್ತು. ಮೀಸಲು ಸಂಗ್ರಹದಲ್ಲಿ ಹೆಚ್ಚಿನ ಪಾಲು ಹೊಂದಿರುವ ವಿದೇಶಿ ಕರೆನ್ಸಿಗಳ ಸಂಗ್ರಹವು ₹25,999 ಕೋಟಿಯಷ್ಟು ಏರಿಕೆ ಆಗಿದ್ದು ₹41.40 ಲಕ್ಷ ಕೋಟಿಗೆ ತಲುಪಿದೆ ಎಂದು ಆರ್‌ಬಿಐ ತಿಳಿಸಿದೆ.
ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್0 ಭಾರತದ ಮೀಸಲು ಸಂಗ್ರಹವು ₹16,560 ಕೋಟಿಯಷ್ಟು ಹೆಚ್ಚಾಗಿ ₹42,310 ಕೋಟಿಗೆ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.